ಕೊರೊನಾ ಎಫೆಕ್ಟ್​​ : ಆರು ತಿಂಗಳ ಕಾಲ ಚುನಾವಣೆಗಳನ್ನು ಮುಂದೂಡಿದ ರಾಜ್ಯ ಸರ್ಕಾರ

ಬೆಂಗಳೂರು : ಕೊರೊನಾ ಪ್ರಕರಣಗಳು ಹೆಚ್ಚಳ ವಾಗುತ್ತಿರುವ ಹಿನ್ನೆಲೆ ಮುಂದಿನ ಆರು ತಿಂಗಳುಗಳ ಕಾಲ ರಾಜ್ಯದಲ್ಲಿ ಎಲ್ಲಾ ಚುನಾವಣೆಗಳನ್ನು ಮುಂದೂಡಲು ಚುನಾವಣಾ ಆಯೋಗಕ್ಕೆ ಶಿಫಾರಸ್ಸು ಮಾಡಲಾಗಿದೆ ಎಂದು ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ತಿಳಿಸಿದರು.

ಸಚಿವ ಸಂಪುಟ ಸಭೆಯ ನಂತರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಬಿಬಿಎಂಪಿ, ತಾಲೂಕು ಪಂಚಾಯಿತಿ, ಜಿಲ್ಲಾ ಪಂಚಾಯಿತಿ, ಕನ್ನಡ ಸಾಹಿತ್ಯ ಪರಿಷತ್ ಸೇರಿದಂತೆ ಕೆಲ ಪುರಸಭೆ, ನಗರಸಭೆ ಚುನಾವಣೆಗಳು ಆರು ತಿಂಗಳುಗಳ ಕಾಲ ಮುಂದೂಡಿಕೆಯಾಗಲಿದೆ. ಈ ಸಮಯದಲ್ಲಿ ಚುನಾವಣೆಗಳನ್ನು ನಡೆಸಿದರೇ ಮತ್ತಷ್ಟು ಸಮಸ್ಯೆ ಉಂಟಾಗುತ್ತದೆ. ಹೀಗಾಗಿ ಈ ತೀರ್ಮಾನಕ್ಕೆ ಬರಲಾಗಿದೆ ಎಂದರು.

ಬಿಬಿಎಂಪಿ, ತಾಲೂಕು ಪಂಚಾಯಿತಿ, ಜಿಲ್ಲಾ ಪಂಚಾಯಿತಿ, ಕನ್ನಡ ಸಾಹಿತ್ಯ ಪರಿಷತ್ ಸೇರಿದಂತೆ ಕೆಲ ಪುರಸಭೆ, ನಗರಸಭೆ ಚುನಾವಣೆಗಳು ಆರು ತಿಂಗಳುಗಳ ಕಾಲ ಮುಂದೂಡಿಕೆಯಾಗಲಿದೆ. ಮೇ ತಿಂಗಳ ಅಂತ್ಯದಲ್ಲಿ ತಾಲೂಕು ಮತ್ತು ಜಿಲ್ಲಾ ಪಂಚಾಯಿತಿ ಅಧಿಕಾರವಧಿ ಮುಗಿಯಲಿದೆ, ಅಂತಿಮ ಗಡುವಿನೊಳಗೆ ಚುನಾವಣೆ ನಡೆಸಲು ಸಿದ್ಧತೆ ಕೈಗೊಳ್ಳಲಾಗಿತ್ತು. ಹಾಗೆಯೇ ಕನ್ನಡ ಸಾಹಿತ್ಯ ಪರಿಷತ್ ಚುನಾವಣೆ ಮೇ 9ರಂದು ನಡೆಯಲು ದಿನಾಂಕ ನಿಗದಿಯಾಗಿತ್ತು. ಆದರೆ, ಇದೀಗ ಆರು ತಿಂಗಳುಗಳ ಕಾಲ ಎಲ್ಲ ಚುನಾವಣೆ ಮುಂದೂಡಿರುವುದರಿಂದ ಈ ಚುನಾವಣೆ ಮುಂದೂಡಿಕೆಯಾಗಲಿದೆ.

Related Articles

Leave a Reply

Your email address will not be published. Required fields are marked *

Back to top button
Close

Adblock Detected

Support Free Content We use ads to keep our content free for you. Please allow ads and let sponsors fund your surfing. Thank you!