ಧಾರವಾಡ : ಬಿಸಿಯೂಟ ಕಾರ್ಯಕರ್ತರ ಸಹಾಯಧನ ಹೆಚ್ಚಳಕ್ಕೆ ಆಗ್ರಹಿಸಿ ಇಂದು(ಫೆ.03) ಧಾರವಾಡ ಜಿಲ್ಲಾಧಿಕಾರಿ ಕಚೇರಿ ಎದುರು ಸೌಟು ಮತ್ತು ಚಮಚ ಹಿಡಿದು ಪ್ರತಿಭಟನೆ ನಡೆಸಲಾಗಿದೆ.
ಬಜೆಟ್ನಲ್ಲಿ 6000 ರೂಪಾಯಿ ಗೌರವ ಧನ ಹೆಚ್ಚಿಸುವಂತೆ ಆಗ್ರಹಿಸಿ, ಕರ್ನಾಟಕ ರಾಜ್ಯ ಸಂಯುಕ್ತ ಅಕ್ಷರ ದಾಸೋಹ ಕಾರ್ಮಿಕರ ಸಂಘದಿಂದ ನೂರಕ್ಕೂ ಹೆಚ್ಚು ಕಾರ್ಯಕರ್ತೆಯರು ಸೌಟು ಹಿಡಿದು ಪ್ರತಿಭಟನೆ ನಡೆಸಿದರು. ಜೊತೆಗೆ ಅಡುಗೆ ಸಮವಸ್ತ್ರ ಕೊಡದ ಹಿನ್ನೆಲೆ ಸರ್ಕಾರದ ವಿರುದ್ಧ ಘೋಷಣೆ ಕೂಗಿ, ಪರಸ್ವರ ಸೌಟು ಬಡೆದು ಆಕ್ರೋಶ ವ್ಯಕ್ತಪಡಿಸಿದರು.