ಬೆಂಗಳೂರು : ಬಿಜೆಪಿ ಸರ್ಕಾರದ ಅವಧಿಯಲ್ಲಿ ನಿರ್ಮಾಣಗೊಂಡಿದ್ದ ಪರಶುರಾಮ ಥೀಮ್ ಪಾರ್ಕ್ ಕಳಪೆ ಕಾಮಗಾರಿ ಹಾಗೂ ಅವ್ಯವಹಾರದ ಪ್ರಕರಣದ ತನಿಖೆಯನ್ನು ಸರ್ಕಾರ ಸಿಐಡಿಗೆ (CID) ಒಪ್ಪಿಸಿದೆ.
ಉಡುಪಿ ಜಿಲ್ಲೆ ಕಾರ್ಕಳ ತಾಲ್ಲೂಕಿನ ಎರ್ಲಪಾಡಿ ಗ್ರಾಮದ ಬೈಲೂರಿನಲ್ಲಿ ಮಾಜಿ ಸಚಿವ, ಹಾಲಿ ಶಾಸಕ ಸುನೀಲ್ ಕುಮಾರ್ ಪರಶುರಾಮ ಥೀಮ್ ಪಾರ್ಕ್ ನಿರ್ಮಿಸಿದ್ದರು. ಕಾಮಗಾರಿ ಪೂರ್ಣಗೊಳ್ಳದೇ ಈ ಥೀಮ್ ಪಾರ್ಕ್ ಉದ್ಘಾಟನೆ ಮಾಡಲಾಗಿದೆ ಎಂದು ಕಾಂಗ್ರೆಸ್ ಆರೋಪಿಸಿತ್ತು.
ಈ ಸಂಬಂಧ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರಾಗಿರುವ ಲಕ್ಷ್ಮೀ ಹೆಬ್ಬಾಳ್ಕರ್ ಅವರ ಶಿಫಾರಸ್ಸಿನಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೀಗ ಸಿಐಡಿ ತನಿಖೆಗೆ ಆದೇಶಿಸಿದ್ದಾರೆ. ಬಿಜೆಪಿ ಸರ್ಕಾರದ ಅವಧಿಯಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೂತನ ಥೀಂ ಪಾರ್ಕ್ ಲೋಕಾರ್ಪಣೆ ಮಾಡಿದ್ದರು. ವಿಧಾನ ಸಭಾ ಚುನಾವಣೆಗೆ ತಿಂಗಳು ಬಾಕಿ ಇರುವಾಗ ಥೀಂ ಪಾರ್ಕ್ ಉದ್ಘಾಟನೆ ಶಾಸಕರಿಗೆ ಭಾರೀ ಯಶಸ್ಸು ತಂದುಕೊಟ್ಟಿತ್ತು.