ಆರಂಭಿಕ ಪೃಥ್ವಿ ಶಾ ಸಿಡಿಲಬ್ಬರದ ಬ್ಯಾಟಿಂಗ್ ಪ್ರದರ್ಶನದಿಂದ ಡೆಲ್ಲಿ ಕ್ಯಾಪಿಟಲ್ಸ್ ತಂಡ ಐಪಿಎಲ್ ಟಿ-20 ಪಂದ್ಯದಲ್ಲಿ 8 ವಿಕೆಟ್ ಗಳ ಭಾರೀ ಅಂತರದಿಂದ ಕೋಲ್ಕತಾ ನೈಟ್ ರೈಡರ್ಸ್ ತಂಡವನ್ನು ಸೋಲಿಸಿದೆ.
ಅಹಮದಾಬಾದ್ ನಲ್ಲಿ ಶುಕ್ರವಾರ ನಡೆದ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಕೆಕೆಆರ್ ತಂಡವನ್ನು 20 ಓವರ್ ಗಳಲ್ಲಿ 6 ವಿಕೆಟ್ ಗೆ 154 ರನ್ ಗಳಿಗೆ ಕಡಿವಾಣ ಹಾಕಿದ ಡೆಲ್ಲಿ ಕ್ಯಾಪಿಟಲ್ಸ್ 18 ಓವರ್ ಗಳಲ್ಲಿ 2 ವಿಕೆಟ್ ಕಳೆದುಕೊಂಡು ಜಯಭೇರಿ ಬಾರಿಸಿತು.
ಪೃಥ್ವಿ ಶಾ 41 ಎಸೆತಗಳಲ್ಲಿ 11 ಬೌಂಡರಿ ಹಾಗೂ 3 ಸಿಕ್ಸರ್ ಸೇರಿದ 82 ರನ್ ಸಿಡಿಸಿದರೆ, ಶಿಖರ್ ಧವನ್ 47 ಎಸೆತಗಳಲ್ಲಿ 4 ಬೌಂಡರಿ ಹಾಗೂ 1 ಸಿಕ್ಸರ್ ಒಳಗೊಂಡ 46 ರನ್ ಬಾರಿಸಿದರು. ಇವರಿಬ್ಬರು ಮೊದಲ ವಿಕೆಟ್ ಗೆ 13.5 ಓವರ್ ಗಳಲ್ಲಿ 132 ರನ್ ಜೊತೆಯಾಟ ನಿಭಾಯಿಸಿ ಏಕಪಕ್ಷೀಯ ಗೆಲುವಿಗೆ ಕಾರಣರಾದರು.