ದೇಶದಲ್ಲಿ ಕಳೆದ 24 ಗಂಟೆಯಲ್ಲಿ 3.86 ಮಂದಿಗೆ ಕೊರೊನಾ ಸೋಂಕು ಪ್ರಕರಣಗಳು ಕಾಣಿಸಿಕೊಂಡಿದ್ದು, ದಾಖಲೆಯ 3,498 ಮಂದಿ ಸೋಂಕಿಗೆ ಬಲಿಯಾಗಿದ್ದಾರೆ.
ಕೇಂದ್ರ ಆರೋಗ್ಯ ಸಚಿವಾಲಯ ಶುಕ್ರವಾರ ಬಿಡುಗಡೆ ಮಾಡಿದ ಮಾಹಿತಿ ಪ್ರಕಾರ ದೇಶದಲ್ಲಿ 3,86,452 ಕೊರೊನಾ ಸೋಂಕು ಪ್ರಕರಣಗಳು ವರದಿಯಾಗಿದ್ದು, ಒಟ್ಟಾರೆ ಸೋಂಕಿತರ ಸಂಖ್ಯೆ 1,87,62,976ಕ್ಕೆ ಜಿಗಿತ ಕಂಡಿದ್ದರೆ, ಸಾವಿನ ಸಂಖ್ಯೆ 2,08,330ಕ್ಕೆ ತಲುಪಿದೆ.
ಒಂದು ದಿನದಲ್ಲಿ 2,97,540 ಮಂದಿ ಸೋಂಕಿನಿಂದ ಚೇತರಿಸಿಕೊಂಡಿದ್ದು, ಒಟ್ಟಾರೆ ಗುಣಮುಖಿತರ ಸಂಖ್ಯೆ 1,53,84,418ಕ್ಕೆ ಏರಿಕೆಯಾಗಿದೆ. ಇದರಿಂದ ಸಕ್ರಿಯ ಪ್ರಕರಣಗಳ ಸಂಖ್ಯೆ 31,70,228ಕ್ಕೆ ತಲುಪಿದೆ.