ಬೆಂಗಳೂರು: ರಾಜ್ಯದಲ್ಲಿ ಇಂದು ಹೊಸದಾಗಿ 37,733 ಜನರಿಗೆ ಕೊರೊನಾ ಸೋಂಕು ತಗುಲಿದೆ. ಒಟ್ಟು ಸೋಂಕಿತರ ಸಂಖ್ಯೆ 16,01,865 ಕ್ಕೆ ಏರಿಕೆಯಾಗಿದೆ.
ರಾಜ್ಯದಲ್ಲಿ ಇಂದು 217 ಜನ ಸೋಂಕಿತರು ಸಾವನ್ನಪ್ಪಿದ್ದಾರೆ. ಇದುವರೆಗೆ ಕೊರೊನಾ ಸೋಂಕಿನಿಂದ ಮೃತಪಟ್ಟವರ ಸಂಖ್ಯೆ 16,011 ಕ್ಕೆ ಏರಿಕೆಯಾಗಿದೆ. 21,149 ಜನ ಸೋಂಕಿತರು ಗುಣಮುಖರಾಗಿ ಬಿಡುಗಡೆಯಾಗಿದ್ದು, ಇದುವರೆಗೆ 11,64,398 ಜನ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ. ರಾಜ್ಯದಲ್ಲಿ ಬರೋಬ್ಬರಿ 4,21,436 ಸಕ್ರಿಯ ಪ್ರಕರಣಗಳಿವೆ.
ಬೆಂಗಳೂರಿನಲ್ಲಿ ಕೊರೊನಾ ಸ್ಫೋಟವಾಗಿದ್ದು, ಒಂದೇ ದಿನ 21,199 ಜನರಿಗೆ ಸೋಂಕು ತಗುಲಿದೆ. 64 ಮಂದಿ ಸಾವನ್ನಪ್ಪಿದ್ದಾರೆ. 2,81,767 ಸಕ್ರಿಯ ಪ್ರಕರಣಗಳು ಇವೆ.