ನವದೆಹಲಿ: ದೇಶದಲ್ಲಿ ಕೊರೊನಾ ಅಬ್ಬರ ಮುಂದುವರೆದಿದ್ದು, ಕಳೆದ 24 ಗಂಟೆಗಳಲ್ಲಿ ದೇಶದಲ್ಲಿ 3,57 ಲಕ್ಷ ಹೊಸ ಪ್ರಕರಣಗಳು ಪತ್ತೆಯಾಗಿವೆ. ಈ ಮೂಲಕ ಸೋಂಕಿತರ ಸಂಖ್ಯೆ 2 ಕೋಟಿ ಗಡಿ ದಾಟಿದೆ.
ಒಂದೇ ದಿನ 3,57,229 ಹೊಸ ಪ್ರಕರಣಗಳು ಪತ್ತೆಯಾಗುವುದರೊಂದಿಗೆ ದೇಶದಲ್ಲಿ ಇದೀಗ ಸೋಂಕಿತರ ಸಂಖ್ಯೆ 2 ಕೋಟಿ ಗಡಿ ದಾಟಿ 2,02,82,833ಕ್ಕೆ ಏರಿಕೆಯಾಗಿದೆ. ಇನ್ನು ಒಂದೇ ದಿನ ದೇಶದಲ್ಲಿ 3,449 ಮಂದಿ ಸಾವು ಸಂಭವಿಸಿದ್ದು, ಸಾವಿನ ಸಂಖ್ಯೆ 2,18,959ಕ್ಕೆ ತಲುಪಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ.
ದೇಶದಲ್ಲಿ ದೈನಂದಿನ ಸೋಂಕಿತರ ಸಂಖ್ಯೆ ದಾಖಲೆ ಮಟ್ಟದಲ್ಲಿ ಏರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 34,47,133ಕ್ಕೆ ಏರಿಕೆಯಾಗಿದೆ.
ಈ ನಡುವೆ ಕಳೆದ 24 ಗಂಟೆಗಳಲ್ಲಿ 3,20,289 ಮಂದಿ ಗುಣಮುಖರಾಗುವುದರೊಂದಿಗೆ ಈವರೆಗೂ ಚೇತರಿಸಿಕೊಂಡವರ ಸಂಖ್ಯೆ 1,66,13,292ಕ್ಕೆ ತಲುಪಿದೆ.