ಬೆಂಗಳೂರು: ಬೆಡ್ ಬ್ಲಾಕಿಂಗ್ ದಂಧೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಸಿಬಿ ಪೊಲೀಸರು ಇಬ್ಬರು ವೈದ್ಯರು ಸೇರಿದಂತೆ 8 ಮಂದಿ ಮಂದಿಯನ್ನು ವಶಕ್ಕೆ ಪಡೆದಿದ್ದಾರೆ.
ಬಿಬಿಎಂಪಿ ಕೋವಿಡ್ ವಾರ್ ರೂಮ್ ಉಸ್ತುವಾರಿ ಡಾ.ರೆಹಾನ್ ಸೇರಿದಂತೆ 8 ಮಂದಿಯನ್ನು ಜಯನಗರ ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ. ನಿನ್ನೆ ರಾತ್ರಿಯೇ ವಾರ್ ರೂಮ್ ಮೇಲೆ ದಾಳಿ ನಡೆಸಿದ ಪೊಲೀಸರು ಆರೋಪಿಗಳನ್ನು ಬಂಧಿಸಿದ್ದಾಗಿ ತಿಳಿದುಬಂದಿದೆ.
ಆರೋಪಿಗಳು ಕೊರೊನಾ ಸೋಂಕಿತರಿಗೆ 3 ಬೆಡ್ ಕೊಡಿಸಿ 1.7 ಲಕ್ಷ ಹಣ ವಸೂಲಿ ಮಾಡಿದ್ದರು ಎನ್ನಲಾಗಿದೆ. ಈ ಬಗ್ಗೆ ಖಚಿತ ಮಾಹಿತಿ ಪಡೆದ ಪೊಲಿಸರು ಆರೋಪಿಗಳನ್ನು ವಶಕ್ಕೆ ಪಡೆದಿದ್ದಾರೆ.