ಸೆಕ್ಯೂರೆಟಿ ಗಾರ್ಡ್ ಹಾಗೂ ಅವರ ಪತ್ನಿಯನ್ನು ದುಷ್ಕರ್ಮಿಗಳು ಹತ್ಯೆ ಮಾಡಿದ ಘಟನೆ ಬೆಂಗಳೂರಿನ ಪೀಣ್ಯಾ ಪೊಲೀಸ್ ಠಾಣಾ ವ್ಯಾಪ್ತಿಯ ಆಂಧ್ರಹಳ್ಳಿ ಮುಖ್ಯ ರಸ್ತೆಯಲ್ಲಿ ಘಟನೆ ನಡೆದಿದೆ.
ಬೃಂದಾವನ ನಗರದ ಜಿಲ್ಲಾ ಸಂಖ್ಯಾ ಸಂಗ್ರಹಣಾಧಿಕಾರಿ ಕಚೇರಿಯಲ್ಲಿ ಸೆಕ್ಯೂರೆಟಿ ಆಗಿ ಕರ್ತವ್ಯ ನಿರ್ವಹಿಸಿದ್ದ ಹನುಮಂತರಾಯ (42) ಮತ್ತು ಹೊನ್ನಮ್ಮ (34) ಹತ್ಯೆಗೊಳಗಾದ ದುರ್ದೈವಿ.
ಸಂಖ್ಯಾ ಸಂಗ್ರಹಣಾಧಿಕಾರಿ ಕಚೇರಿಯಲ್ಲಿ ಸೆಕ್ಯುರಿಟಿಯಾಗಿದ್ದ ಹನುಮಂತರಾಯ ಜೊತೆಗೆ ಪತ್ನಿ ಇಬ್ಬರೂ ಕಚೇರಿಯಲ್ಲೇ ವಾಸವಿದ್ದರು. ಇಂದು ಬೆಳಿಗ್ಗೆ ಬಾಗಿಲು ತೆರೆಯದಿದ್ದಾಗ ಸ್ಥಳೀಯರ ಮನವಿ ಮೇರೆಗೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿದರು.
ಪೊಲೀಸರು, ಅಧಿಕಾರಿಗಳ ಸಮ್ಮುಖದಲ್ಲಿ ಬಾಗಿಲು ತೆಗೆದಾಗ ದಂಪತಿ ಶವವಾಗಿ ಪತ್ತೆಯಾಗಿದ್ದು, ಪೀಣ್ಯಾ ಪೊಲೀಸ್ ಠಾಣಾ ಪ್ರಕರಣ ದಾಖಲಾಗಿದೆ.