ರಾಜ್ಯದಲ್ಲಿ 24 ಗಂಟೆಗಳ ಅವಧಿಯಲ್ಲಿ 47,563 ಮಂದಿಗೆ ಕೊರೊನಾ ಪಾಸಿಟಿವ್ ದೃಢಪಟ್ಟಿದ್ದು, 482 ಸೋಂಕಿತರು ಮಹಾಮಾರಿಗೆ ಬಲಿಯಾಗಿದ್ದಾರೆ.
ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಶನಿವಾರ ಬಿಡುಗಡೆ ಮಾಡಿದ ಮಾಹಿತಿ ಪ್ರಕಾರ ರಾಜ್ಯದಲ್ಲಿ ಒಟ್ಟಾರೆ ಸೋಂಕಿತರ ಸಂಖ್ಯೆ 1,88,6448ಕ್ಕೆ ಏರಿಕೆಯಾದರೆ, ಸಾವಿನ ಸಂಖ್ಯೆ 18,286ಕ್ಕೆ ಜಿಗಿತ ಕಂಡಿದೆ.
ರಾಜ್ಯದಲ್ಲಿ ಒಂದೇ 34,881 ಸೋಂಕಿತರು ಗುಣಮುಖಿತರಾಗಿದ್ದು, ಒಟ್ಟಾರೆ ಗುಣಮುಖಿತರ ಸಂಖ್ಯೆ 1,31,93,01ಕ್ಕೆ ತಲುಪಿದೆ. ಇದರಿಂದ ಸಕ್ರಿಯ ಪ್ರಕರಣಗಳ ಸಂಖ್ಯೆ ಕೂಡ 5,48,881ಕ್ಕೆ ಜಿಗಿತ ಕಂಡಿದೆ.
ರಾಜಧಾನಿ ಬೆಂಗಳೂರಿನಲ್ಲಿ 21,534 ಹೊಸದಾಗಿ ಸೋಂಕು ಪ್ರಕರಣಗಳು ವರದಿಯಾಗಿದ್ದು, 18,473 ಮಂದಿ ಸೋಂಕಿತರು ಗುಣಮುಖಿತರಾಗಿದ್ದಾರೆ. ಒಂದು ದಿನದಲ್ಲಿ 285 ಮಂದಿ ಕೊರೊನಾ ಗೆ ಬಲಿಯಾಗಿದ್ದು, ಒಟ್ಟಾರೆ ಸಾವಿನ ಸಂಖ್ಯೆ 7776ಕ್ಕೆ ಜಿಗಿತ ಕಂಡಿದೆ. ಒಟ್ಟಾರೆ ಸೋಂಕಿತರ ಸಂಖ್ಯೆ 3,44,754ಕ್ಕೆ ಏರಿಕೆಯಾಗಿದ್ದು, ಸಕ್ರಿಯ ಪ್ರಕರಣಗಳ ಸಂಖ್ಯೆ 3,44,754ಕ್ಕೆ ತಲುಪಿದೆ.