ಮೈಸೂರು : ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಬಿಜೆಪಿ ಸಂಸದ ಪ್ರತಾಪ್ ಸಿಂಹ ಅವರಿಗೆ ಕೊರೊನಾ ಪಾಸಿಟಿವ್ ಧೃಡಪಟ್ಟಿದೆ.
ಅವರಿಗೆ ಯಾವುದೇ ರೋಗ ಲಕ್ಷಣಗಳಿಲ್ಲದಿದ್ದರೂ ಕೊರೊನಾ ಪಾಸಿಟಿವ್ ತಗುಲಿದೆ. ಇನ್ನೂ ಅವರಿಗೆ ರ್ಯಾಪಿಡ್ ಟೆಸ್ಟ್ ನಲ್ಲಿ ನೆಗೆಟಿವ್ ಬಂದಿದ್ದರೂ ಕೂಡ ಆರ್ಟಿಪಿಸಿಆರ್ ಕೊರೊನಾ ಪರೀಕ್ಷೆಯಲ್ಲಿ ಪಾಸಿಟಿವ್ ವರದಿ ಬಂದಿದೆ.
ಈ ಬಗ್ಗೆ ಮಾಹಿತಿ ಹಂಚಿಕೊಂಡಿರುವ ಪ್ರತಾಪ್ ಸಿಂಹ ಅವರು ಶಾಂತವೇರಿ ಗೋಪಾಲಗೌಡ ಆಸ್ಪತ್ರೆಯಲ್ಲಿ ರ್ಯಾಪಿಡ್ ಟೆಸ್ಟ್ ನಡೆಸಿದಾಗ ನೆಗೆಟಿವ್ ಬಂದಿತ್ತು, ಆದರೆ ಆರ್ ಟಿಪಿಸಿಆರ್ ಪರೀಕ್ಷೆಯಲ್ಲಿ ಪಾಸಿಟಿವ್ ಬಂದಿದೆ. ಯಾರೇ ನನ್ನ ಜೊತೆ ಸಂಪರ್ಕದಲ್ಲಿದ್ದರೂ ಪರೀಕ್ಷೆ ಮಾಡಿಸಿಕೊಳ್ಳಿ ಎಂದು ಟ್ವೀಟ್ ಮೂಲಕ ಮಾಹಿತಿ ಹಂಚಿಕೊಂಡಿದ್ದಾರೆ.