ಹಾಸನ : ಆಕ್ಸಿಜನ್ ಇಲ್ಲದೇ ಕೊರೊನಾ ಸೋಂಕಿತರು ಪರದಾಡಿರುವ ಘಟನೆ ಹಾಸನದಲ್ಲಿ ನಡೆದಿದೆ. ಹಾಸನ ಜಿಲ್ಲಾ ಕೇಂದ್ರದ ಪ್ರತಿಷ್ಠಿತ ಹಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಕೊರೊನಾ ಸೋಂಕಿತರಿಗೆ ನೀಡಲು ಆಕ್ಸಿಜನ್ ಕೊರತೆ ಎದುರಾಗಿದೆ.
ಈ ವೇಳೆ ಆಕ್ಸಿಜನ್ ನೀಡಿ ನಮ್ಮ ಜೀವ ಉಳಿಸಿ ಎಂದು ಸೋಂಕಿತರು ಆಸ್ಪತ್ರೆ ಸಿಬ್ಬಂದಿಯನ್ನು ಗೋಗರೆದಿದ್ದಾರೆ. ಆಕ್ಸಿಜನ್ ಇಲ್ಲದೆ ಸುಮಾರು ಎರಡು ಗಂಟೆಗಳ ಕಾಲ ಸೋಂಕಿತರು ನರಳಾಡಿದ್ದು, ಅಧಿಕಾರಿಗಳು ಹಾಗೂ ಸಿಬ್ಬಂದಿಗಳ ವಿರುದ್ಧದ ಸೋಂಕಿತರ ಸಂಬಂಧಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ರೋಗಿಗಳು ನರಳಾಟದ ನಂತರ ಆಕ್ಸಿಜನ್ ನೀಡಿದ್ದಾರೆ. ನಂತರ ಓರ್ವ ಕೊರೊನಾ ಸೋಂಕಿತ ಸಾವನ್ನಪ್ಪಿದ್ದಾನೆ. ಹಾಸನ ಜಿಲ್ಲೆಯಲ್ಲಿ ದಿನೇ ದಿನೇ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದ್ಧರೆ ಮತ್ತೊಂದೆಡೆ ಸಾವಿನ ಸಂಖ್ಯೆಯು ಏರಿಕೆಯಾಗುತ್ತಿದೆ.