ಬೆಂಗಳೂರು : ಬೆಡ್ ಬ್ಲಾಕಿಂಗ್ ದಂಧೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಸಿಬಿ ಪೊಲೀಸರು ಇಂದು ಮತ್ತೊಬ್ಬ ಆರೋಪಿಯನ್ನು ಬಂಧಿಸಿದ್ದಾರೆ. ಆಂಥೋನಿ ಎಂಬಾತ ಬಂಧಿತ ಆರೋಪಿ. ಈತ ಸಪ್ತಗಿರಿ ಆಸ್ಪತ್ರೆಯಲ್ಲಿ ಮಾರ್ಕೆಟಿಂಗ್ ಎಕ್ಸಿಕ್ಯೂಟಿವ್ ಆಗಿ ಕೆಲಸ ಮಾಡುತ್ತಿದ್ದ ಎಂದು ತಿಳಿದು ಬಂದಿದೆ.
ಆರೋಪಿ ಆಂಥೋನಿ ರೋಗಿ ಕಡೆಯಿಂದ ಹಣ ಪಡೆದು ಬೆಡ್ ಬ್ಲಾಕಿಂಗ್ ಮಾಡುತ್ತಿದ್ದ ಎಂದು ತಿಳಿದು ಬಂದಿದೆ. ಈತ ಒಬ್ಬೊಬ್ಬ ರೋಗಿಯಿಂದ ಸುಮಾರು 40-50 ಸಾವಿರ ಹಣ ಪಡೆಯುತ್ತಿದ್ದ ಎನ್ನಲಾಗಿದೆ. ಸದ್ಯ ಆರೋಪಿ ಆಂಥೋನಿಯನ್ನು ಸಿಸಿಬಿ ಪೊಲೀಸರು ಬಂಧಿಸಿದ್ದು ವಿಚಾರಣೆ ನಡೆಸುತ್ತಿದ್ದಾರೆ.
ಪ್ರಕರಣ ಸಂಬಂಧ ಇದುವರೆಗೂ 8 ಆರೋಪಿಗಳನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಉಳಿದ ಇಬ್ಬರು ಆರೋಪಿಗಳಿಗೆ ಕೋವಿಡ್ ಪಾಸಿಟಿವ್ ಆಗಿದೆ. ಚೇತರಿಕೆ ಕಂಡ ಬಳಿಕ ಅವರನ್ನು ಬಂಧಿಸಿ ವಿಚಾರಣೆ ನಡೆಸಲಾಗುತ್ತದೆ.