ದೇಶದಲ್ಲಿ ಕಳೆದ 24 ಗಂಟೆಯಲ್ಲಿ 3,11,170 ಮಂದಿಯಲ್ಲಿ ಕೊರೊನಾ ಸೋಂಕು ಪ್ರಕರಣಗಳು ದೃಢಪಟ್ಟಿದ್ದು, 4077 ಮಂದಿ ಸೋಂಕಿಗೆ ಬಲಿಯಾಗಿದ್ದಾರೆ.
ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಭಾನುವಾರ ಪ್ರಕಟಿಸಿದ ಕೊರೊನಾ ಬುಲೆಟಿನ್ ನಲ್ಲಿ ದೇಶದಲ್ಲಿ ಸೋಂಕು ಪ್ರಮಾಣ ಶೇ.53.15ರಷ್ಟು ಏರಿಕೆಯಾಗಿದ್ದು, ಇದರಲ್ಲಿ ಕರ್ನಾಟಕದ ಪಾಲು ಶೇ.13.39ರಷ್ಟಾಗಿದೆ.
ಒಂದು ದಿನದಲ್ಲಿ 3,62,437 ಮಂದಿ ಗುಣಮುಖಿತರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದು, ಒಟ್ಟಾರೆ ಗುಣಮುಖಿತರ ಸಂಖ್ಯೆ 2,07,95,335ಕ್ಕೆ ಜಿಗಿತ ಕಂಡಿದೆ. ಒಟ್ಟಾರೆ ಸೋಂಕಿತರ ಸಂಖ್ಯೆ 2,46,84,077ಕ್ಕೆ ತಲುಪಿದ್ದು, ಒಟ್ಟಾರೆ ಸಾವಿನ ಸಂಖ್ಯೆ 2,70,284ಕ್ಕೆ ಏರಿದೆ. ಈ ನಡುವೆ ದೇಶದಲ್ಲಿ ವ್ಯಾಕ್ಸಿನ್ ಪಡೆದವರ ಸಂಖ್ಯೆ 18,22,20,144ಕ್ಕೆ ಏರಿಕೆಯಾಗಿದೆ.