ಚಾಮರಾಜನಗರ : ಗಡಿ ಜಿಲ್ಲೆ ಚಾಮರಾಜನಗರದಲ್ಲಿ ಮಹಾಮಾರಿ ಕೊರೊನಾ ಹೆಚ್ಚಾಗಿದ್ದು, ಕೊವಿಡ್ ನಿರ್ವಹಣೆಗೆ ಚಾಮರಾಜನಗರ ಸಂಸದರು 50 ಲಕ್ಷ ರೂಪಾಯಿ ಅನುದಾನ ನೀಡಿದ್ದಾರೆ.
ಕೋವಿಡ್ ನಿರ್ವಹಣೆಗೆ ಚಾಮರಾಜನಗರ ಕ್ಷೇತ್ರದ ಸಂಸದ ವಿ.ಶ್ರೀನಿವಾಸ ಪ್ರಸಾದ್ 50 ಲಕ್ಷ ರೂ. ಅನುದಾನ ನೀಡಿದ್ದು, ಈ ಕುರಿತು ಜಿಲ್ಲಾಧಿಕಾರಿ ಡಾ.ಎಂ.ಆರ್.ರವಿ ಅವರಿಗೆ ಪತ್ರ ಬರೆದಿದ್ದಾರೆ.
2019-20 ನೇ ಸಾಲಿನ ಸ್ಥಳೀಯ ಪ್ರದೇಶಾಭಿವೃದ್ಧಿ ಯೋಜನೆಯಡಿಯ 2ನೇ ಕಂತಿನ 50 ಲಕ್ಷ ರೂಪಾಯಿ ಅನುದಾನವನ್ನು ಚಾಮರಾಜನಗರದ ಲೋಕಸಭಾ ಕ್ಷೇತ್ರ ವ್ಯಾಪ್ತಿಯ ಕೋವಿಡ್ ನಿರ್ವಹಣೆಗೆ ಬಳಸಿಕೊಳ್ಳಲು ಅನುಮತಿ ನೀಡಲಾಗಿದೆ ಎಂದು ಜಿಲ್ಲಾಧಿಕಾರಿಗೆ ಸಂಸದ ವಿ.ಶ್ರೀನಿವಾಸ ಪ್ರಸಾದ್ ಪತ್ರ ಬರೆದಿದ್ದಾರೆ.