ರಾಜ್ಯದಲ್ಲಿ ಕಳೆದ 24 ಗಂಟೆಯಲ್ಲಿ 28,869 ಮಂದಿಗೆ ಕೊರೊನಾ ಸೋಂಕು ಕಾಣಿಸಿಕೊಂಡಿದ್ದು, 548 ಮಂದಿ ಅಸುನೀಗಿದ್ದಾರೆ.
ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಗುರುವಾರ ಬಿಡುಗಡೆ ಮಾಡಿದ ಮಾಹಿತಿ ಪ್ರಕಾರ ರಾಜಧಾನಿ ಬೆಂಗಳೂರಿನಲ್ಲಿ 9,409 ಮಂದಿಯಲ್ಲಿ ಕೊರೊನಾ ಸೋಂಕು ಕಾಣಿಸಿಕೊಂಡಿದ್ದು, 289 ಮಂದಿ ಮಹಾಮಾರಿಗೆ ಬಲಿಯಾಗಿದ್ದಾರೆ.
ರಾಜ್ಯದಲ್ಲಿ ಕೊರೊನಾ ಸೋಂಕು ಪ್ರಮಾಣ ಕಡಿಮೆ ಇದ್ದರೂ ಸಾವಿನ ಸಂಖ್ಯೆ ದಿನದಿಂದ ದಿನಕ್ಕೆ ಏರಿಕೆಯಾಗುತ್ತಲೇ ಇರುವುದು ಆತಂಕ ಮೂಡಿಸಿದೆ. ಅದರಲ್ಲೂ ಟೆಸ್ಟಿಂಗ್ ಪ್ರಮಾಣ ಕಡಿಮೆ ಮಾಡಿದ್ದರೂ ಈ ಸಂಖ್ಯೆ ಹೆಚ್ಚುತ್ತಿರುವುದು ಅನುಮಾನ ಮೂಡಿಸಿದೆ.