ದೇಶದಲ್ಲಿ ಕಳೆದ 24 ಗಂಟೆಯಲ್ಲಿ 1.96 ಲಕ್ಷ ಕೊರೊನಾ ಸೋಂಕು ಪ್ರಕರಣಗಳು ವರದಿಯಾಗಿದ್ದು, 3511 ಮಂದಿ ಮಹಾಮಾರಿಗೆ ಬಲಿಯಾಗಿದ್ದಾರೆ.
ಕೇಂದ್ರ ಆರೋಗ್ಯ ಸಚಿವಾಲಯ ಮಂಗಳವಾರ ಬಿಡುಗಡೆ ಮಾಡಿದ ಮಾಹಿತಿ ಪ್ರಕಾರ ಏಪ್ರಿಲ್ 14ರ ನಂತರ ಇದೇ ಮೊದಲ ಬಾರಿ ದೇಶದಲ್ಲಿ 2 ಲಕ್ಷಕ್ಕಿಂತ ಕಡಿಮೆ ಸೋಂಕು ಪ್ರಕರಣಗಳು ವರದಿಯಾಗಿವೆ.