ಮಂಡ್ಯ: ಕೋವಿಡ್ ಸೋಂಕಿನಿಂದ ಬಳಲುತ್ತಿದ್ದ ಮಹಿಳೆ ಮಗುವಿಗೆ ಜನ್ಮ ನೀಡಿದ ಎರಡು ದಿನಗಳ ನಂತರ ಮೃತಪಟ್ಟ ಘಟನೆ ಮಂಡ್ಯ ಜಿಲ್ಲೆಯ ಮದ್ದೂರು ತಾಲೂಕಿನ ಅರೆತಿಪ್ಪೂರು ಗ್ರಾಮದಲ್ಲಿ ನಡೆದಿದೆ.
ಮದ್ದೂರು ತಾಲೂಕಿನ ಅರೆತಿಪ್ಪೂರು ಗ್ರಾಮದ ನಿವಾಸಿ ಮನೋಹರ್ ಎಂಬುವವರ ಪತ್ನಿ, ಉಪನ್ಯಾಸಕಿ ಗುಣಶ್ರೀ (33) ಮೃತರು. ಮಳವಳ್ಳಿ ಪಟ್ಟಣದ ಶಾಂತಿ ಕಾಲೇಜಿನ ಉಪನ್ಯಾಸಕಿಯಾಗಿದ್ದ ಗುಣಶ್ರೀ ಅವರು ನಾಲ್ಕು ವರ್ಷಗಳ ಹಿಂದೆ ಅರೆತಿಪ್ಪೂರು ಗ್ರಾಮದ ಮನೋಹರ ಅವರ ಜತೆ ಮದುವೆಯಾಗಿತ್ತು. 3 ವರ್ಷಗಳ ನಂತರ ಗರ್ಭಿಣಿಯಾಗಿದ್ದ ಗುಣಶ್ರೀ ಅವರಿಗೆ ಏಳು ತಿಂಗಳು ತುಂಬಿತ್ತು.
ಇತ್ತೀಚೆಗೆ ಕೊರೊನಾ ಸೋಂಕು ತಗುಲಿತ್ತು ತೀವ್ರ ಉಸಿರಾಟದ ಸಮಸ್ಯೆ ಎದುರಿಸುತ್ತಿದ್ದ ಹಿನ್ನೆಲೆಯಲ್ಲಿ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಬಳಿಕ ಅಲ್ಲಿಂದ ಮಂಡ್ಯ ಜಿಲ್ಲಾಸ್ಪತ್ರ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ವೈದ್ಯರು ಮಹಿಳೆ ಪ್ರಾಣಕ್ಕೆ ಅಪಾಯವಿದೆ ಎಂದು ಹೇಳಿ ಸಿಸೇರಿಯನ್ ಮೂಲಕ ಹೆರಿಗೆ ಮಾಡಿಸಲಾಗಿತ್ತು. ಆದರೆ, ತಾಯಿ, ಹೆರಿಗೆಯಾದ ಎರಡು ದಿನಗಳ ಬಳಿಕ ಮಂಗಳವಾರ ಮೃತಪಟ್ಟರು.