ನವದೆಹಲಿ: ಕಳೆದ 24 ಗಂಟೆಯಲ್ಲಿ ದೇಶದಲ್ಲಿ 1,52,734 ಕೊರೊನಾ ಪಾಸಿಟಿವ್ ಪ್ರಕರಣಗಳು ದೃಢಪಟ್ಟಿವೆ. 3,128 ಮಂದಿ ಸಾವನ್ನಪ್ಪಿದ್ದು, ಒಟ್ಟು ಸೋಂಕಿತರ ಸಂಖ್ಯೆ 2,80,47,534ಕ್ಕೆ ಏರಿಕೆಯಾಗಿದೆ.
ಕೇಂದ್ರ ಆರೋಗ್ಯ ಸಚಿವಾಲಯ ಸೋಮವಾರ ಬಿಡುಗಡೆ ಮಾಡಿದ ಮಾಹಿತಿ ಪ್ರಕಾರ ದೇಶದಲ್ಲಿ ಒಟ್ಟಾರೆ ಸೋಂಕಿತರ ಸಂಖ್ಯೆ 2,80,47,534ಕ್ಕೆ ಏರಿಕೆಯಾಗಿದ್ದು, ಒಟ್ಟಾರೆ ಸಾವಿನ ಸಂಖ್ಯೆ 3,29,100ಕ್ಕೆ ಜಿಗಿತ ಕಂಡಿದೆ.
ಇನ್ನು ದೇಶದಲ್ಲಿ 20,26,092 ಸಕ್ರಿಯ ಪ್ರಕರಣಗಳಿದ್ದು, 2,56,92,342 ಸೋಂಕಿತರು ಗುಣಮುಖರಾಗಿದ್ದಾರೆ. ಕಳೆದ 24 ಗಂಟೆಯಲ್ಲಿ 2,38,022 ಸೋಂಕಿತರು ಗುಣಮುಖರಾಗಿ ಡಿಶ್ಚಾರ್ಜ್ ಆಗಿದ್ದಾರೆ.