ಕೊರೊನಾ ಲಸಿಕೆ ಪಡೆಯ ಕುಟುಂಬಗಳಿಗೆ ರೇಷನ್ ನೀಡದೇ ಇರಲು ಗದಗ ಜಿಲ್ಲೆಯ ರೋಣ ತಾಲೂಕಿನ ಕೊತಬಾಳ ಗ್ರಾಮ ಪಂಚಾಯಿತಿ ಸಾಮಾನ್ಯ ಸಭೆಯಲ್ಲಿ ತೀರ್ಮಾನ ಕೈಗೊಂಡಿದೆ.
ಇತ್ತೀಚೆಗೆ ನಡೆದ ಗ್ರಾಮ ಪಂಚಾಯಿತಿ ಸಭೆಯಲ್ಲಿ ಲಸಿಕೆ ಹಾಕಿಸಿಕೊಳ್ಳದ ಕುಟುಂಬಗಳಿಗೆ ಸರಕಾರದ ವತಿಯಿಂದ ಪಡಿತರ ನೀಡದೇ ಇರಲು ಸರ್ವಾನುಮತದಿಂದ ನಿರ್ಧರಿಸಲಾಯಿತು.
ಲಸಿಕೆ ಹಾಕಿಸಿಕೊಂಡವರಿಗೆ ಆರೋಗ್ಯ ಇಲಾಖೆ ಪ್ರಮಾಣ ಪತ್ರ ನೀಡುತ್ತದೆ. ಪಡಿತರ ಚೀಟಿದಾರರು ತಮ್ಮ ಪಡಿತರ ಕಾರ್ಡನೊಂದಿಗೆ ಆರೋಗ್ಯ ಇಲಾಖೆ ಪತ್ರ ತೋರಿಸಿದರೆ ಮಾತ್ರ ಪಡಿತರ ನೀಡಲಾಗುವುದು.
ಕೊರೊನಾ ಸೋಂಕು ತಡೆಗಟ್ಟುವ ನಿಟ್ಟಿನಲ್ಲಿ ಈ ಗ್ರಾಮ ಪಂಚಾಯಿತಿ ಸದಸ್ಯರು ಕಟ್ಟುನಿಟ್ಟಿನ ನಿರ್ಧಾರ ಕೈಗೊಂಡಿದ್ದು, ಈ ನಿರ್ಧಾರ ಕೈಗೊಳ್ಳುತ್ತಿದ್ಧಂತೆ ಅದೇ ದಿನ ನೂರಕ್ಕೂ ಹೆಚ್ಚು ಗ್ರಾಮಸ್ಥರು ವ್ಯಾಕ್ಸಿನ್ ಪಡೆದಿದ್ದಾರೆ ಎನ್ನಲಾಗಿದೆ.