ಬೆಂಗಳೂರು : ಅನಾರೋಗ್ಯದಿಂದ ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿದ್ದ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಇಂದು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.
ಕಳೆದ ವಾರದಿಂದ ತೀವ್ರ ಜ್ವರದಿಂದ ಬಳಲುತ್ತಿದ್ದ ಸಿದ್ದರಾಮಯ್ಯ ಅವರು ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿದ್ದರು. ಒಂದು ವಾರ ಚಿಕಿತ್ಸೆ ಬಳಿಕ ಇದೀಗ ಗುಣಮುಖರಾಗಿದ್ದು, ಇಂದು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.
ಅಸ್ಪತ್ರೆಯಿಂದ ಹೊರ ಬಂದ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರಿಗೆ ಹೂವಿನ ಮಳೆಗರೆದು ಸ್ವಾಗಿತಿಸಲಾಯಿತು.