ಬೆಂಗಳೂರು : ರಾಜೀನಾಮೆ ನೀಡುತ್ತೇನೆ ಎನ್ನುವುದು ನಾಟಕ ಅಷ್ಟೇ, ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಆಡಳಿತ ನಡೆಸುವಲ್ಲಿ ವಿಫಲವಾಗಿದ್ದಾರೆ ಎಂದು ಸರ್ಕಾರ ವಿರುದ್ದ ವಿರೋಧಪಕ್ಷ ನಾಯಕ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದರು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಯಡಿಯೂರಪ್ಪ ಸರ್ಕಾರ ಸಂಪೂರ್ಣ ವಿಫಲವಾಗಿದೆ ಎಂದು ಕೆಂದ್ರ ಸರ್ಕಾರಕ್ಕೆ ಗೊತ್ತಾಗಿದೆ. ಆದರೆ ಅವರಿಗೆ ಪರ್ಯಾಯ ನಾಯಕರು ಯಾರು ಎಂಬುದರ ಬಗ್ಗೆ ಗೊಂದಲವಿದೆ. ಜೊತೆಗೆ ಪ್ರಧಾನ ಮಂತ್ರಿ ನರೇಂದ್ರ ಮೋದಿ ಉಚಿತವಾಗಿ ಲಸಿಕೆ ನೀಡುತ್ತೇವೆ ಎಂದು ಹೇಳಿದ್ದಾರೆ. ಲಸಿಕೆ ಕೊಡುತ್ತಾರೆ ಎಂದು ನನಗೆ ನಂಬಿಕೆಯಿಲ್ಲ ಎಂದು ವ್ಯಂಗ್ಯ ಮಾಡಿದ್ದರು.
ಇದೆ ವೇಳೆ ಐಎಎಸ್ ಅಧಿಕಾರಿಗಳ ಜಟಾಪಟಿ ಬಗ್ಗೆ ಪ್ರಸ್ತಾಪಿಸಿದ ಸಿದ್ದರಾಮಯ್ಯ, ಅಧಿಕಾರಗಳ ಮಧ್ಯೆ ತಂದಿಡುವ ಕೆಲಸವನ್ನು ಪ್ರತಾಪ ಸಿಂಹ ಮಾಡಿದ್ದಾರೆ. ಅಧಿಕಾರಿಗಳಿಗೆ ಮಾಧ್ಯಮಗಳ ಮುಂದೆ ಮಾತನಾಡುವ ಅಧಿಕಾರ ಕೊಟ್ಟವರು ಯಾರು, ಇದು ಇಡಿ ಆಡಳಿತ ವ್ಯವಸ್ಥೆ ಕುಸಿದಿದೆ ಎಂಬುದನ್ನು ತೋರಿಸುತ್ತದೆ ಎಂದು ಸರ್ಕಾರವನ್ನು ತರಾಟೆಗೆ ತೆಗೆದುಕೊಂಡರು.