ಬೆಂಗಳೂರು : ರಾಜ್ಯ ಸರ್ಕಾರದಿಂದ ಸದ್ಯಕ್ಕೆ ಬಿಎಂಟಿಸಿ, ಕೆಎಸ್ಆರ್ಟಿಸಿ ಬಸ್ ಟಿಕೆಟ್ ದರ ಹೆಚ್ಚಳ ಇಲ್ಲ ಎಂದು ಉಪಮುಖ್ಯಮಂತ್ರಿ ಹಾಗೂ ಸಾರಿಗೆ ಸಚಿವ ಲಕ್ಷ್ಮಣ್ ಸವದಿ ಸ್ಪಷ್ಟ ಪಡಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈಗಾಗಲೇ ಲಾಕ್ ಡೌನ್ ನಿಂದಾಗಿ ರಾಜ್ಯದ ಜನರು ಆರ್ಥಿಕ ಸಂಕಷ್ಟಕ್ಕೆ ಸಿಲುಕಿದ್ದಾರೆ. ಸಾರಿಗೆ ಬಸ್ ನಲ್ಲಿ ಪ್ರಯಾಣಿಸುವವರು ಬಡ ಪ್ರಯಾಣಿಕರಾಗಿದ್ದಾರೆ. ಇಂತಹ ಸಾರಿಗೆ ಪ್ರಯಾಣಿಕರಿಗೆ ಆರ್ಥಿಕ ಸಂಕಷ್ಟದ ನಡುವೆಯೂ ಮತ್ತೊಂದು ಬರೆ ಎಳೆಯುವುದಕ್ಕೆ ಸರ್ಕಾರ ಮುಂದಾಗಲ್ಲ. ಸದ್ಯಕ್ಕೆ ಕೆ ಎಸ್ ಆರ್ ಟಿ ಸಿ ಹಾಗೂ ಬಿಎಂಟಿಸಿ ಬಸ್ ಟಿಕೆಟ್ ದರ ಏರಿಕೆ ಮಾಡುವುದಿಲ್ಲ ಎಂದರು.
ಪ್ರಯಾಣ ದರ ಏರಿಕೆಯ ಬಗ್ಗೆ ಅಧಿಕಾರಿಗಳು ಪ್ರಸ್ತಾವನೆ ಸಲ್ಲಿಸಿದ್ದಾರೆ. ಆದರೆ, ಈ ಬಗ್ಗೆ ಮುಂದಿನ ದಿನಗಳಲ್ಲಿ ನೋಡೋಣ. ಈ ಮೂಲಕ ಸಾರಿಗೆಯ 4 ನಾಲ್ಕು ನಿಗಮದ ಪ್ರಯಾಣ ದರ ಏರಿಕೆಯನ್ನು ಸದ್ಯಕ್ಕೆ ಮಾಡುವುದಿಲ್ಲ ಎಂದು ತಿಳಿಸಿದರು.