ಬೆಂಗಳೂರು : ಕಳೆದ 24 ಗಂಟೆಯಲ್ಲಿ ರಾಜ್ಯದಲ್ಲಿ 6,835 ಕೊರೊನಾ ಪಾಸಿಟಿವ್ ಕೇಸ್ ದೃಢಪಟ್ಟಿದ್ದು, 120 ಸೋಂಕಿತರು ಸಾವನ್ನಪ್ಪಿದ್ದಾರೆ. ಒಟ್ಟು ಸೋಂಕಿತರ ಸಂಖ್ಯೆ 27,71,969ಕ್ಕೆ ಏರಿಕೆಯಾಗಿದೆ.
ರಾಜ್ಯ ಆರೋಗ್ಯ ಇಲಾಖೆ ಭಾನುವಾರದ ಹೆಲ್ ಬುಲೆಟಿನ್ ಪ್ರಕಾರ ರಾಜ್ಯದಲ್ಲಿ ಇಂದು 6,835 ಕೊರೊನಾ ಪ್ರಕರಣಗಳು ಪತ್ತೆಯಾಗಿವೆ. 120 ಸೋಂಕಿತರು ಸಾವನ್ನಪ್ಪಿದ್ದು, ಇದುವರೆಗೆ 33,033 ಮಂದಿ ಸೋಂಕಿತರು ಸಾವನ್ನಪ್ಪಿದ್ದಾರೆ.
ರಾಜ್ಯದಲ್ಲಿ ಇಂದು 15,409 ಮಂದಿ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. ಇದುವರೆಗೆ 25,66,774 ಮಂದಿ ಗುಣಮುಖರಾಗಿ ಡಿಶ್ಚಾರ್ಜ್ ಆಗಿದ್ದಾರೆ. ರಾಜ್ಯದಲ್ಲಿ ಒಟ್ಟು 1,72,144 ಸಕ್ರಿಯ ಪ್ರಕರಣಗಳಿವೆ.
ಬೆಂಗಳೂರಿನಲ್ಲಿ ಇಂದು 1,470 ಕೊರೊನಾ ಪ್ರಕರಣಗಳು ಪತ್ತೆಯಾಗಿದ್ದು, 12 ಸೋಂಕಿತರು ಸಾವನ್ನಪ್ಪಿದ್ದಾರೆ. 85,044 ಸಕ್ರಿಯ ಪ್ರಕರಣಗಳಿವೆ.