ಕೊರೊನಾ ಪಾಸಿಟಿವಿಟಿ ದರ ಕಡಿಮೆ ಇರುವ 16 ಜಿಲ್ಲೆಗಳಲ್ಲಿ ಲಾಕ್ ಡೌನ್ ಸಡಿಲಗೊಳಿಸಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಘೋಷಿಸಿದ್ದು, ಸೋಮವಾರದಿಂದ ಹೊಸ ಮಾರ್ಗಸೂಚಿ ಜಾರಿಗೆ ಬರಲಿದೆ.
ಶನಿವಾರ ಸಚಿವರ ಜೊತೆ ಚರ್ಚಿಸಿದ ನಂತರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬೆಳಿಗ್ಗೆ 6ರಿಂದ ಸಂಜೆ 5ರವರೆಗೆ ಅಂಗಡಿಗಳು ತೆರೆಯಬಹುದಾಗಿದೆ. ಎಸಿ ರಹಿತ ಹೋಟೆಲ್ ಗಳನ್ನು ತೆರೆಯಲು ಅವಕಾಶ ನೀಡಲಾಗಿದೆ ಎಂದರು.
ರಾಜ್ಯದಲ್ಲಿ ಬಸ್ ಸಂಚಾರಕ್ಕೆ ಅನುಮತಿ ನೀಡಲಾಗಿದ್ದು, ಹೊರಂಗಾಣ ಚಿತ್ರೀಕರಣಕ್ಕೆ ಅನುಮತಿ ನೀಡಲಾಗಿದೆ. ಸಿನಿಮಾ ಥಿಯೇಟರ್, ಮಸೀದಿ, ಮಂದಿರಕ್ಕೆ ನಿರ್ಬಂಧ ವಿಧಿಸಲಾಗಿದೆ ಎಂದು ಅವರು ಹೇಳಿದರು.