45 ವರ್ಷದ ಪುಷ್ಕರ್ ಸಿಂಗ್ ಧಾಮಿ ಉತ್ತರಾಖಂಡ್ ನ ನೂತನ ಮುಖ್ಯಮಂತ್ರಿಯಾಗಿ ಭಾನುವಾರ ಸಂಜೆ ಪ್ರಮಾಣ ವಚನ ಸ್ವೀಕರಿಸಿದರು. ಈ ಮೂಲಕ ರಾಜ್ಯದ 11ನೇ ಹಾಗೂ ಅತ್ಯಂತ ಕಿರಿಯ ಸಿಎಂ ಎಂಬ ಗೌರವಕ್ಕೆ ಪಾತ್ರರಾದರು.
ಭಾನುವಾರ ನಡೆದ ಸರಳ ಸಮಾರಂಭದಲ್ಲಿ ಬೇಬಿ ರಾಣಿ ಮೌರ್ಯ ಪ್ರಮಾಣ ವಚನ ಬೋಧಿಸಿದರು. ಈ ಮೂಲಕ ನಾಲ್ಕು ತಿಂಗಳ ಅವಧಿಯಲ್ಲಿ ರಾಜ್ಯ ಮೂರನೇ ಮುಖ್ಯಮಂತ್ರಿಯನ್ನು ಕಾಣುವಂತಾಗಿದೆ. ತೀರಥ್ ಸಿಂಗ್ ರಾಜೀನಾಮೆಯಿಂದ ತೆರವಾದ ಸ್ಥಾನಕ್ಕೆ ಪುಷ್ಕರ್ ಸಿಂಗ್ ಬಿಜೆಪಿ ನಾಯಕರು ಆಯ್ಕೆ ಮಾಡಿದ್ದರು.
ಪುಷ್ಕರ್ ಜೊತೆ ಧನ್ ಸಿಂಗ್ ರಾವತ್, ರೇಖಾ ಆರ್ಯ ಮತ್ತು ಸ್ವಾಮಿ ಯತೀಶ್ವರ್ ನಾಡ್ ಸಚಿವ ಸಂಪುಟಕ್ಕೆ ಸೇರ್ಪಡೆಗೊಂಡರು. ಅಲ್ಲದೇ ಇತರೆ 9 ಶಾಸಕರು ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದರು.