ದೇಶದಲ್ಲಿ ಕಳೆದ 24 ಗಂಟೆಯಲ್ಲಿ 37,593 ಕೊರೊನಾ ಸೋಂಕು ಪ್ರಕರಣಗಳು ಕಂಡು ಬಂದಿದ್ದು, 648 ಮಂದಿ ಸೋಂಕಿಗೆ ಬಲಿಯಾಗಿದ್ದಾರೆ. ಈ ಮೂಲಕ ಕೊರೊನಾ ಮತ್ತೆ ಜಿಗಿತ ಕಂಡಿದೆ.
ಕೇಂದ್ರ ಆರೋಗ್ಯ ಸಚಿವಾಲಯ ಬುಧವಾರ ಬಿಡುಗಡೆ ಮಾಡಿದ ಮಾಹಿತಿ ಪ್ರಕಾರ ದೇಶದಲ್ಲಿ ಒಂದು ದಿನದಲ್ಲಿ 34,169 ಮಂದಿ ಗುಣಮುಖಿತರಾಗಿದ್ದು ಒಟ್ಟಾರೆ ಗುಣಮುಖಿತರ ಸಂಖ್ಯೆ 3,17,54,281ಕ್ಕೆ ಏರಿಕೆಯಾಗಿದೆ. ಸಕ್ರಿಯ ಪ್ರಕರಣಗಳ ಸಂಖ್ಯೆ 3,22,327ಕ್ಕೆ ಏರಿಕೆಯಾಗಿದೆ.
ದೇಶದಲ್ಲಿ ಸೋಂಕು ಪ್ರಮಾಣದಲ್ಲಿ ಹೆಚ್ಚಳ ಆಗಲು 5 ರಾಜ್ಯಗಳ ಕೊಡುಗೆ ಕಾರಣವಾಗಿದ್ದು, ಅದರಲ್ಲೂ ಕೇರಳದಲ್ಲಿ 24,296 ಒಂದೇ ದಿನ ಸೋಂಕು ಪ್ರಕರಣಗಳು ದೃಢಪಟ್ಟಿವೆ.