ಕೆಳ ಕ್ರಮಾಂಕದಲ್ಲಿ ರಿಷಭ್ ಪಂತ್ ಮತ್ತು ಶಾರ್ದೂಲ್ ಠಾಕೂರ್ ಸಿಡಿಸಿದ ಅರ್ಧಶತಕಗಳ ನೆರವಿನಿಂದ ಭಾರತ ತಂಡ ನಾಲ್ಕನೇ ಟೆಸ್ಟ್ ಪಂದ್ಯದ ಎರಡನೇ ಇನಿಂಗ್ಸ್ ನಲ್ಲಿ ಬೃಹತ್ ಮೊತ್ತದತ್ತ ದಾಪುಗಾಲಿರಿಸಿದ್ದು, ಭಾರೀ ಮುನ್ನಡೆ ಗಳಿಸಿದೆ.
ಓವಲ್ ಮೈದಾನದಲ್ಲಿ ನಡೆಯುತ್ತಿರುವ ಪಂದ್ಯದ ನಾಲ್ಕನೇ ದಿನವಾದ ಭಾನುವಾರ ಒಂದು ಹಂತದಲ್ಲಿ 312 ರನ್ ಗಳಿಗೆ 8 ವಿಕೆಟ್ ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿದ್ದ ಭಾರತ ತಂಡವನ್ನು ಶಾರ್ದೂಲ್ ಮತ್ತು ಪಂತ್ ಜೋಡಿ ಪಾರು ಮಾಡಿತು. ಚಹಾ ವಿರಾಮಕ್ಕೂ ಮುನ್ನ ಭಾರತ 8 ವಿಕೆಟ್ ಕಳೆದುಕೊಂಡು 414 ರನ್ ಗಳಿಸಿದೆ.
ಮೊದಲ ಇನಿಂಗ್ಸ್ ನಲ್ಲಿ ಅರ್ಧಶತಕ ಸಿಡಿಸಿ ತಂಡವನ್ನು ಮುನ್ನಡೆಸಿದ್ದ ಶಾರ್ದೂಲ್ ಠಾಕೂರ್ ಎರಡನೇ ಇನಿಂಗ್ಸ್ ನಲ್ಲೂ ಅರ್ಧಶತಕ ಸಿಡಿಸಿ ತಂಡವನ್ನು ಆಧರಿಸಿದರು. ಶಾರ್ದೂಲ್ 70 ಎಸೆತಗಳಲ್ಲಿ 7 ಬೌಂಡರಿ ಮತ್ತು 1 ಸಿಕ್ಸರ್ ನೆರವಿನಿಂದ 60 ರನ್ ಗಳಿಸಿ ಔಟಾದರೆ, ರಿಷಭ್ ಪಂತ್ 105 ಎಸೆತಗಳಲ್ಲಿ 4 ಬೌಂಡರಿ ಸಹಾಯದಿಂದ ಅರ್ಧಶತಕ ಪೂರೈಸಿ ನಿರ್ಗಮಿಸಿದರು.