ಪ್ರೀತಿಸಿದ ಯುವತಿ ಮದುವೆ ನಿರಾಕರಿಸಿದ್ದರಿಂದ ನೊಂದ ಯುವಕ ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಂಗಳೂರಿನ ಆರ್ ಆರ್ ನಗರ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
31 ವರ್ಷದ ಸಿದ್ಧರಾಮ ಆತ್ಮಹತ್ಯೆಗೆ ಶರಣಾದ ದುರ್ದೈವಿ.
ಸಿದ್ದರಾಮ್ ಹಾಗೂ ಸುಧಾ ಕಳೆದ ಮೂರು ವರ್ಷಗಳಿಂದ ಪರಸ್ಪರ ಪ್ರೀತಿಸುತ್ತಿದ್ದರು. ಆದರೆ ಆದರೆ ನಿನ್ನೆ ಇಬ್ಬರ ನಡುವೆ ಗಲಾಟೆ ನಡೆದಿದ್ದು, ಸುಧಾ ಮದುವೆ ಆಗಲು ಹಿಂದೇಟು ಹಾಕಿದ್ದಾಳೆ. ಅಲ್ಲದೇ ಮತ್ತೊಬ್ಬನನ್ನು ಪ್ರೀತಿಸುತ್ತಿದ್ದಳು ಎಂಬ ವಿಷಯ ತಿಳಿದು ಸಿದ್ದರಾಮ್ ಆಘಾತಗೊಂಡಿದ್ದ ಎಂದು ಹೇಳಲಾಗಿದೆ. ಆರ್ ಆರ್ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.