ಮುಂದಿನ ತಿಂಗಳು ದುಬೈನಲ್ಲಿ ನಡೆಯಲಿರುವ ಐಸಿಸಿ ಟಿ-20 ವಿಶ್ವಕಪ್ ಟೂರ್ನಿಗೆ ಬಿಸಿಸಿಐ 15 ಆಟಗಾರರ ಭಾರತ ತಂಡವನ್ನು ಪ್ರಕಟಿಸಿದ್ದು, ಅನುಭವಿ ಶಿಖರ್ ಧವನ್ ಮತ್ತು ಸ್ಪಿನ್ನರ್ ಯಜುರ್ವೆಂದ್ರ ಚಾಹಲ್ ಅವರನ್ನು ಕೈಬಿಡಲಾಗಿದೆ.
ಬಿಸಿಸಿಐ ಬುಧವಾರ ರಾತ್ರಿ 15 ಆಟಗಾರರ ತಂಡವನ್ನು ಪ್ರಕಟಿಸಿದ್ದು, ಕೆಎಲ್ ರಾಹುಲ್ ತಂಡದಲ್ಲಿ ಸ್ಥಾನ ಪಡೆದ ಏಕೈಕ ಆಟಗಾರನಾಗಿದ್ದಾರೆ.
ಟಿ20 ವಿಶ್ವಕಪ್ ಟೂರ್ನಿಗೆ ಅಕ್ಟೋಬರ್ 17 ರಂದು ಚಾಲನೆ ಸಿಗಲಿದ್ದು, ನವೆಂಬರ್ 14ರಂದು ಫೈನಲ್ ಪಂದ್ಯ ನಡೆಯಲಿದೆ. ಅಕ್ಟೋಬರ್ 17 ಮೊದಲ ರೌಂಡ್ ಪಂದ್ಯ ಒಮನ್ ಮತ್ತು ಪಿಎನ್ಜಿ ನಡುವೆ ನಡೆಯಲಿದ್ದು, ಸಾಕಷ್ಟು ರೋಚಕತೆ ಸೃಷ್ಟಿಸಲಿರುವ ಭಾರತ ಹಾಗೂ ಪಾಕಿಸ್ತಾನ ನಡುವಣ ಪಂದ್ಯ ಅಕ್ಟೋಬರ್ 24 ರಂದು ದುಬೈ ಅಂತರರಾಷ್ಟ್ರೀಯ ಕ್ರೀಡಾಂಗಣದಲ್ಲಿ ಆಯೋಜಿಸಲಾಗಿದೆ. ಟೂರ್ನಿಯ ಮೊದಲ ಸೂಪರ್ 12 ಪಂದ್ಯ ಆಸ್ಟ್ರೇಲಿಯಾ ಹಾಗೂ ದಕ್ಷಿಣ ಆಫ್ರಿಕಾ ನಡುವೆ ಅ. 23ಕ್ಕೆ ಆರಂಭವಾಗಲಿದೆ ಎಂದು ವರದಿಗಳು ತಿಳಿಸಿವೆ.
ಭಾರತ ತಂಡ: ವಿರಾಟ್ ಕೊಹ್ಲಿ (ನಾಯಕ), ರೋಹಿತ್ ಶರ್ಮಾ (ಉಪನಾಯಕ), ಕೆಎಲ್ ರಾಹುಲ್, ಸೂರ್ಯಕುಮಾರ್ ಯಾದವ್, ರಿಷಭ್ ಪಂತ್ (ವಿಕೆಟ್ ಕೀಪರ್), ಇಶಾನ್ ಕಿಶನ್ (ವಿಕೆಟ್ ಕೀಪರ್), ಹಾರ್ದಿಕ್ ಪಾಂಡ್ಯ, ರವೀಂದ್ರ ಜಡೇಜಾ, ರಾಹುಲ್ ಚಹರ್, ರವಿಚಂದ್ರನ್ ಅಶ್ವಿನ್, ಅಕ್ಷರ್ ಪಟೇಲ್, ವರುಣ್ ಚಕ್ರವರ್ತಿ, ಜಸ್ಪ್ರೀತ್ ಬುಮ್ರಾ, ಭುವನೇಶ್ವರ್ ಕುಮಾರ್, ಮೊಹ್ಮದ್ ಶಮಿ.
ಮೀಸಲು ಆಟಗಾರರು: ಶ್ರೇಯಸ್ ಅಯ್ಯರ್, ಶಾರ್ದೂಲ್ ಠಾಕೂರ್, ದೀಪಕ್ ಚಹರ್.