ದೇಶದಲ್ಲಿ ಕೊರೊನಾ ಸೋಂಕು ಪ್ರಮಾಣದಲ್ಲಿ ಏರಿಕೆಯ ಸೂಚನೆ ಕಂಡು ಬಂದಿದ್ದು, ಕಳೆದ 24 ಗಂಟೆಯಲ್ಲಿ 30,570, ಸೋಂಕು ಪ್ರಕರಣಗಳು ದೃಢಪಟ್ಟಿದ್ದರೆ, 431 ಮಂದಿ ಬಲಿಯಾಗಿದ್ದಾರೆ.
ಕೇಂದ್ರ ಆರೋಗ್ಯ ಸಚಿವಾಲಯ ಬಿಡುಗಡೆ ಮಾಡಿದ ಮಾಹಿತಿ ಪ್ರಕಾರ ದೇಶದಲ್ಲಿ ಒಟ್ಟಾರೆ ಸೋಂಕಿತರ ಸಂಖ್ಯೆ 3,33,47,325ಕ್ಕೆ ಏರಿಕೆಯಾಗಿದ್ದು, ಸಾವಿನ ಸಂಖ್ಯೆ 4,43,928ಕ್ಕೆ ಜಿಗಿತ ಕಂಡಿದೆ.
ಒಂದು ದಿನದಲ್ಲಿ 38,303 ಮಂದಿ ಗುಣಮುಖಿತರಾಗಿದ್ದು, ಒಟ್ಟಾರೆ ಡಿಸ್ಚಾರ್ಜ್ ಆದವರ ಸಂಖ್ಯೆ 3,25,60,474ಕ್ಕೆ ಏರಿಕೆಯಾಗಿದೆ. ಇದರಿಂದ ಸಕ್ರಿಯ ಪ್ರಕರಣಗಳ ಸಂಖ್ಯೆ 3,52,923ಕ್ಕೆ ಇಳಿಕೆಯಾಗಿದೆ.