ಸಾಂಸ್ಕೃತಿಕ ನಗರಿ ಮೈಸೂರಿನ ಹೊರವಲಯದಲ್ಲಿರುವ ಫಾರ್ಮ್ ಹೌಸ್ ನಲ್ಲಿ 10 ವರ್ಷದ ಬಾಲಕಿಯೊಬ್ಬಳ ಮೇಲೆ ಅತ್ಯಾಚಾರ ನಡೆದಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ.
ಬಿಹಾರ ಮೂಲದ ವ್ಯಕ್ತಿಯೊಬ್ಬ 10 ದಿನಗಳ ಹಿಂದೆ ಅತ್ಯಾಚಾರ ನಡೆಸಿದ್ದು, ಆತನನ್ನು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.
ಕುದುರೆಗೆ ಲಾಳ ಹಾಕುವ ಕೆಲಸ ಮಾಡುವ ಬಿಹಾರ ಮೂಲದ ವ್ಯಕ್ತಿ ದರ್ಶನ್ ಅವರ ಫಾರ್ಮ್ ಹೌಸ್ ಗೆ ಬಂದಿದ್ದು, ಶಿವಮೊಗ್ಗದಿಂದ ಬಂದಿದ್ದ ಕುಟುಂಬದ ಬಾಲಕಿ ಮೇಲೆ ಅತ್ಯಾಚಾರ ಎಸಗಿದ ವ್ಯಕ್ತಿ ಯಾರ ಬಳಿಯೂ ಬಾಯಿ ಬಿಡದಂತೆ ಬೆದರಿಕೆ ಹಾಕಿದ್ದ ಎಂದು ದೂರಿನಲ್ಲಿ ತಿಳಿದು ಬಂದಿದೆ.