ದೇಶದಲ್ಲಿ ಕಳೆದ ಒಂದು ದಿನದಲ್ಲಿ ಹೊಸದಾಗಿ 30,773 ಕೊರೊನಾ ಸೋಂಕು ಪ್ರಕರಣಗಳು ದೃಢಪಟ್ಟಿದ್ದು, 309 ಮಂದಿ ದೃಢಪಟ್ಟಿದ್ದಾರೆ.
ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಭಾನುವಾರ ಬಿಡುಗಡೆ ಮಾಡಿದ ಮಾಹಿತಿ ಪ್ರಕಾರ ದೇಶದಲ್ಲಿ ಒಟ್ಟಾರೆ ಸೋಂಕಿತರ ಸಂಖ್ಯೆ 3,34,48,163ಕ್ಕೆ ಏರಿಕೆಯಾಗಿದ್ದು, ಒಟ್ಟಾರೆ ಸಾವಿನ ಸಂಖ್ಯೆ 4,44,838ಕ್ಕೆ ಜಿಗಿತ ಕಂಡಿದೆ.
ಒಂದು ದಿನದಲ್ಲಿ 38,945 ಮಂದಿ ಸೋಂಕಿನಿಂದ ಡಿಸ್ಚಾರ್ಜ್ ಆಗಿದ್ದು, ಒಟ್ಟಾರೆ ಗುಣಮುಖಿತರ ಸಂಖ್ಯೆ 3,26,71,167ಕ್ಕೆ ಜಿಗಿತ ಕಂಡಿದ್ದು, ಸಕ್ರಿಯ ಪ್ರಕರಣಗಳ ಸಂಖ್ಯೆ 3,32,158 ತಲುಪಿದೆ.