ದೇಶದಲ್ಲಿ ಕಳೆದ 24 ಗಂಟೆಯಲ್ಲಿ 29,616 ಕೊರೊನಾ ಸೋಂಕು ಪ್ರಕರಣಗಳು ದೃಢಪಟ್ಟಿದ್ದು, 290 ಮಂದಿ ಸೋಂಕಿಗೆ ಬಲಿಯಾಗಿದ್ದಾರೆ.
ಕೇಂದ್ರ ಆರೋಗ್ಯ ಸಚಿವಾಲಯ ಶನಿವಾರ ಬಿಡುಗಡೆ ಮಾಡಿದ ಮಾಹಿತಿ ಪ್ರಕಾರ ದೇಶದಲ್ಲಿ ಒಟ್ಟಾರೆ ಸೋಂಕಿತರ ಸಂಖ್ಯೆ 3,36,24,419ಕ್ಕೆ ಏರಿಕೆಯಾದರೆ, ಒಟ್ಟಾರೆ ಸಾವಿನ ಸಂಖ್ಯೆ 4,46,658ಕ್ಕೆ ಏರಿದೆ.
ಒಂದು ದಿನದಲ್ಲಿ 28,046 ಮಂದಿ ಗುಣಮುಖಿತರಾಗಿದ್ದು, ಒಟ್ಟಾರೆ ಗುಣಮುಖಿತರ ಸಂಖ್ಯೆ 3,28,76,319ಕ್ಕೆ ಜಿಗಿತ ಕಂಡಿದೆ. ಸಕ್ರಿಯ ಪ್ರಕರಣಗಳ ಸಂಖ್ಯೆ 3,01,442ಕ್ಕೆ ಇಳಿಕೆಯಾಗಿದೆ. ದೇಶದಲ್ಲಿ ಲಸಿಕೆ ಪಡೆದವರ ಸಂಖ್ಯೆ 90 ಕೋಟಿ ದಾಟಿದೆ.