ನಿಯಮಿತವಾಗಿ ವಿಕೆಟ್ ಕಳೆದುಕೊಂಡ ಡೆಲ್ಲಿ ಕ್ಯಾಪಿಟಲ್ಸ್ ತಂಡ ಐಪಿಎಲ್ ಪಂದ್ಯದಲ್ಲಿ ರಾಜಸ್ಥಾನ್ ರಾಯಲ್ಸ್ ತಂಡಕ್ಕೆ 160 ರನ್ ಗಳ ಸ್ಪರ್ಧಾತ್ಮಕ ಮೊತ್ತದ ಗುರಿ ಒಡ್ಡಿದೆ.
ಅಬುಧಾಬಿಯಲ್ಲಿ ಶನಿವಾರ ನಡೆದ ಪಂದ್ಯದಲ್ಲಿ ಟಾಸ್ ಸೋತರೂ ಮೊದಲು ಬ್ಯಾಟ್ ಮಾಡುವ ಅವಕಾಶ ಪಡೆದ ಡೆಲ್ಲಿ ಕ್ಯಾಪಿಟಲ್ಸ್ ತಂಡ 20 ಓವರ್ ಗಳಲ್ಲಿ 6 ವಿಕೆಟ್ ಕಳೆದುಕೊಂಡು 154 ರನ್ ಗಳಿಸಿತು.
ಆರಂಭಿಕರಾದ ಪೃಥ್ವಿ ಶಾ ಮತ್ತು ಶಿಖರ್ ಧವನ್ ಬೇಗನೇ ನಿರ್ಗಮಿಸಿದ ನಂತರ ಜೊತೆಯಾದ ಮಾಜಿ ನಾಯಕ ಶ್ರೇಯಸ್ ಅಯ್ಯರ್ ಮತ್ತು ಹಾಲಿ ನಾಯಕ ರಿಷಭ್ ಪಂತ್ 3ನೇ ವಿಕೆಟ್ ಗೆ 62 ರನ್ ಪೇರಿಸಿ ತಂಡವನ್ನು ಆಧರಿಸಿದರು. ಆದರೆ ಇವರಿಬ್ಬರು ಔಟಾಗುತ್ತಿದ್ದಂತೆ ತಂಡ ನಾಟಕೀಯ ಕುಸಿತಕ್ಕೆ ಒಳಗಾಯಿತು.
ಶ್ರೇಯಸ್ ಅಯ್ಯರ್ 32 ಎಸೆತಗಳಲ್ಲಿ 1 ಬೌಂಡರಿ ಹಾಗೂ 2 ಸಿಕ್ಸರ್ ನೆರವಿನಿಂದ 43 ರನ್ ಗಳಿಸಿದರೆ, ರಿಷಭ್ ಪಂತ್ 24 ಎಸೆತಗಳಲ್ಲಿ 2 ಬೌಂಡರಿ ಸೇರಿದ 24 ರನ್ ಬಾರಿಸಿದರೆ, ಶಿಮ್ರಾನ್ ಹೆಟ್ಮೆಯರ್ 16 ಎಸೆತಗಳಲ್ಲಿ 5 ಬೌಂಡರಿ ಒಳಗೊಂಡ 28 ರನ್ ಗಳಿಸಿ ತಂಡದ ಮೊತ್ತ ಉಬ್ಬಿಸುವ ಆತುರದಲ್ಲಿ ವಿಕೆಟ್ ಒಪ್ಪಿಸಿದರು.
ರಾಜಸ್ಥಾನ್ ಪರ ಮುಫ್ತುಫಿಸುರ್ ರೆಹಮಾನ್ ಮತ್ತು ಚೇತನ್ ಸಕಾರಿಯಾ ತಲಾ 2 ವಿಕೆಟ್ ಗಳಿಸಿದರು. ಕಾರ್ತಿಕ್ ತ್ಯಾಗಿ ಮತ್ತು ರಾಹುಲ್ ತವಾಟಿಯಾ ತಲಾ 1 ವಿಕೆಟ್ ಪಡೆದರು.