ದೇಶದಲ್ಲಿ ಕಳೆದ 24 ಗಂಟೆಯಲ್ಲಿ 28,326 ಕೊರೊನಾ ಸೋಂಕು ಪ್ರಕರಣಗಳು ದೃಢಪಟ್ಟಿದ್ದು, 260 ಮಂದಿ ಸೋಂಕಿಗೆ ಬಲಿಯಾಗಿದ್ದಾರೆ.
ಕೇಂದ್ರ ಆರೋಗ್ಯ ಸಚಿವಾಲಯ ಶನಿವಾರ ಬಿಡುಗಡೆ ಮಾಡಿದ ಮಾಹಿತಿ ಪ್ರಕಾರ ದೇಶದಲ್ಲಿ ಒಟ್ಟಾರೆ ಸೋಂಕಿತರ ಸಂಖ್ಯೆ 3,36,31,498ಕ್ಕೆ ಏರಿಕೆಯಾದರೆ, ಒಟ್ಟಾರೆ ಸಾವಿನ ಸಂಖ್ಯೆ 4,46,918ಕ್ಕೆ ಏರಿದೆ.
ಒಂದು ದಿನದಲ್ಲಿ 26,032 ಮಂದಿ ಗುಣಮುಖಿತರಾಗಿದ್ದು, ಒಟ್ಟಾರೆ ಗುಣಮುಖಿತರ ಸಂಖ್ಯೆ 3,29,02,351ಕ್ಕೆ ಜಿಗಿತ ಕಂಡಿದೆ. ಸಕ್ರಿಯ ಪ್ರಕರಣಗಳ ಸಂಖ್ಯೆ 3,03,476ಕ್ಕೆ ಇಳಿಕೆಯಾಗಿದೆ. ದೇಶದಲ್ಲಿ ಲಸಿಕೆ ಪಡೆದವರ ಸಂಖ್ಯೆ 90 ಕೋಟಿ ದಾಟಿದೆ.