ರಾಜ್ಯದ ಅಲ್ಲಲ್ಲಿ ಮತಾಂತರ ನಡೆಯುತ್ತಿರುವುದು ಗಮನಕ್ಕೆ ಬಂದಿದ್ದು, ಬಲವಂತದ ಮತಾಂತರ ತಡೆಯಲು ಕಾನೂನು ಜಾರಿಗೆ ತರಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.
ಬೆಂಗಳೂರಿನಲ್ಲಿ ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಯಾದಗಿರಿ, ಬೆಂಗಳೂರಿನ ಬ್ಯಾಡರಹಳ್ಳಿಗಳಲ್ಲಿ ಮತಾಂತರ ನಡೆಯುತ್ತಿರುವ ಆರೋಪಗಳು ಕೇಳಿ ಬಂದಿದ್ದು, ರಾಜ್ಯದ ಅಲ್ಲಲ್ಲಿ ಮತಾಂತರರದ ಘಟನೆ ನಡೀತಿದೆ. ಇಂಥದ್ದಕ್ಕೆಲ್ಲ ಅವಕಾಶ ಕೊಡದಂತೆ ಡಿಸಿಗೆ ಸೂಚಿಸಲಾಗಿದೆ ಎಂದರು.
ರಾಜ್ಯದ ಸಿಂಧಗಿ ಮತ್ತು ಹಾನಗಲ್ ಉಪಚುನಾವಣೆ ದಿನಾಂಕ ಘೋಷಿಸಿರುವ ಬಗ್ಗೆ ಪ್ರತಿಕ್ರಿಯಿಸಿದ ಅವರು, ಸಿಎಂ ಉದಾಸಿ ನಿಧನದಿಂದ ತೆರವಾಗಿರುವ ಹಾನಗಲ್ ಕ್ಷೇತ್ರ ಮತ್ತು ಸಿಂದಗಿ ಮನಗುಳಿ ನಿಧನದಿಂದ ತೆರವಾಗಿರುವ ಕ್ಷೇತ್ರಗಳಿಗೆ ಚುನಾವಣೆ ನಡೆಯಲಿದೆ ಎಂದರು.
ಮೊನ್ನೆಯ ಕೋರ್ ಕಮಿಟಿ ಸಭೆಯಲ್ಲಿ ಅಭ್ಯರ್ಥಿ ಗಳ ಬಗ್ಗೆ ಚರ್ಚೆ ಆಗಿದೆ. ಎರಡು ಕ್ಷೇತ್ರ ಗಳಿಗೂ ಅಬ್ಸರ್ವರ್ ರನ್ನು ಕಳುಹಿಸಿ ಕೊಡುತ್ತೇವೆ. ಅಲ್ಲಿ ಅಭ್ಯರ್ಥಿ ಅಯ್ಕೆ ಬಗ್ಗೆ ಸ್ಥಳೀಯರಿಂದ ಅಭಿಪ್ರಾಯ ಪಡೆದು, ತೀರ್ಮಾನ ಮಾಡುತ್ತೇವೆ. ಎರಡು ಕ್ಷೇತ್ರ ಗಳಲ್ಲೂ ಗೆಲ್ಲುವ ವಿಶ್ವಾಸ ಇದೆ ಎಂದು ಅವರು ಹೇಳಿದರು.