ಉಕ್ರೇನ್ ಮೇಲೆ ಯುದ್ಧ ಸಾರಿರುವ ರಷ್ಯಾ ತಮ್ಮದೇ ದೇಶದಲ್ಲಿ ಫೇಸ್ ಬುಕ್ ಮತ್ತು ಟ್ವಿಟರ್ ಗೆ ನಿರ್ಬಂಧ ವಿಧಿಸಿದೆ.
ಉಕ್ರೇನ್ ಮೇಲೆ ರಷ್ಯಾ ದಾಳಿ 8ನೇ ದಿನಕ್ಕೆ ಕಾಲಿಟ್ಟಿದ್ದು, ಶುಕ್ರವಾರ ದಾಳಿಯಲ್ಲಿ ರಷ್ಯಾ ಸೇನೆ ಅನುಭವಿಸುತ್ತಿರುವ ಕಷ್ಟಗಳ ಕುರಿತು ಸಾಮಾಜಿಕ ಜಾಲತಾಣದಲ್ಲಿ ವರದಿಗಳು ಬರುತ್ತಿರುವ ಹಿನ್ನೆಲೆಯಲ್ಲಿ ರಷ್ಯಾ ಸರಕಾರ ಫೇಸ್ ಬುಕ್ ಮತ್ತು ಟ್ವಿಟರ್ ಖಾತೆಯನ್ನು ನಿರ್ಬಂಧಿಸಿದೆ.