ಸ್ಪಿನ್ನರ್ ರವಿಚಂದ್ರನ್ ಅಶ್ವಿನ್ ಭಾರತದ ಪರ ಅತೀ ಹೆಚ್ಚು ವಿಕೆಟ್ ಪಡೆದ ಕಪಿಲ್ ದೇವ್ ಅವರ ಹೆಸರಿನಲ್ಲಿದ್ದ ದಾಖಲೆಯನ್ನು ಹಿಂದಿಕ್ಕಿದ್ದಾರೆ.
ಮೊಹಾಲಿ ಮೈದಾನದಲ್ಲಿ ನಡೆದ ಮೊದಲ ಟೆಸ್ಟ್ ಪಂದ್ಯದ 2ನೇ ಇನಿಂಗ್ಸ್ ನಲ್ಲಿ 4 ವಿಕೆಟ್ ಪಡೆದ ಆರ್.ಅಶ್ವಿನ್ ಕಪಿಲ್ ದೇವ್ ಅವರನ್ನು ಹಿಂದಿಕ್ಕಿ ಭಾರತದ ಪರ ಅತೀ ಹೆಚ್ಚು ವಿಕೆಟ್ ಪಡೆದ 2ನೇ ಬೌಲರ್ ಎಂಬ ಗೌರವಕ್ಕೆ ಪಾತ್ರರಾದರು.
ಅಶ್ವಿನ್ ಟೆಸ್ಟ್ ನಲ್ಲಿ 400 ವಿಕೆಟ್ ಪಡೆದ 4ನೇ ಬೌಲರ್ ಎನಿಸಿಕೊಂಡಿದ್ದು, ಒಟ್ಟಾರೆ 435 ವಿಕೆಟ್ ಕಬಳಿಸುವ ಮೂಲಕ 434 ವಿಕೆಟ್ ಪಡೆದಿದ್ದ ಕಪಿಲ್ ದೇವ್ ಅವರ ಸಾಧನೆಯನ್ನು ಹಿಂದಿಕ್ಕಿದರು. ಅನಿಲ್ ಕುಂಬ್ಳೆ 619 ವಿಕೆಟ್ ನೊಂದಿಗೆ ಮೊದಲ ಸ್ಥಾನದಲ್ಲಿದ್ದಾರೆ.
2011ರಂದು ವೆಸ್ಟ್ ಇಂಡೀಸ್ ವಿರುದ್ಧದ ಪಂದ್ಯದ ಮೂಲಕ ಅಶ್ವಿನ್ ಟೆಸ್ಟ್ ಕ್ರಿಕೆಟ್ ಗೆ ಪಾದರ್ಪಣೆ ಮಾಡಿದ್ದು, 85 ಟೆಸ್ಟ್ ಗಳಲ್ಲಿ 435 ವಿಕೆಟ್ ಪಡೆದ ಸಾಧನೆ ಮಾಡಿದ್ದಾರೆ. ಅಂತಾರಾಷ್ಟ್ರೀಯ ಕ್ರಿಕೆಟ್ ನಲ್ಲಿ ಅತೀ ಹೆಚ್ಚು ವಿಕೆಟ್ ಪಡೆದವರ ಪಟ್ಟಿಯಲ್ಲಿ 8ನೇ ಸ್ಥಾನ ಪಡೆದಿದ್ದು, ಪ್ರಸ್ತುತ ಆಡುತ್ತಿರುವ ಆಟಗಾರರಲ್ಲಿ ಮೂರನೇಯವರಾಗಿದ್ದಾರೆ.