ರಾಜ್ಯದಲ್ಲಿ ಮುಂಬರುವ ಶೈಕ್ಷಣಿಕ ವರ್ಷದಿಂದಲೇ ಪರಿಷ್ಕೃತ ಪಠ್ಯ ಜಾರಿಗೊಳಿಸಲು ನಿರ್ಧರಿಸಿದೆ ಎಂದು ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ತಿಳಿಸಿದ್ದಾರೆ.
ಬೆಂಗಳೂರಿನಲ್ಲಿ ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜ್ಯದಲ್ಲಿ ಮುಂದಿನ ಶೈಕ್ಷಣಿಕ ವರ್ಷದಿಂದ ಪರಿಷ್ಕೃತ ಪಠ್ಯ ಜಾರಿಗೊಳಿಸಲು ಸಿದ್ಧತೆ ಮಾಡಿಕೊಳ್ಳಲಾಗುತ್ತಿದ್ದು, ಇತಿಹಾಸದ ಬಗ್ಗೆ ಒಂದಷ್ಟು ತಪ್ಪುಗಳು ಆಗಿದ್ದು, ಅವುಗಳನ್ನು ಸರಿ ಮಾಡುವ ಕೆಲಸ ಮಾಡಿದ್ದೇವೆ ಎಂದರು.
ರಾಜಕೀಯ ಉದ್ದೇಶವನ್ನು ಇಟ್ಟುಕೊಂಡು ಪಠ್ಯ ಪರಿಷ್ಕರಣೆ ಮಾಡಿಲ್ಲ. ವಿದ್ಯಾರ್ಥಿಗಳಿಗೆ ಭಾರತದ ಇತಿಹಾಸ, ಭಾರತದ ವಿಜ್ಞಾನದ ಬಗ್ಗೆ ನಿಜವಾದ ಅಂಶಗಳನ್ನು ತಿಳಿಸುವ ಸಲುವಾಗಿ ಪಠ್ಯ ಪರಿಷ್ಕರಣೆ ಮಾಡಿದ್ದೇವೆ ಎಂದು ಶಿಕ್ಷಣ ಸಚಿವ ಬಿ ಸಿ ನಾಗೇಶ್ ತಿಳಿಸಿದ್ದಾರೆ.