ಉಕ್ರೇನ್ ಮೇಲಿನ ಆಕ್ರಮಣದಲ್ಲಿ ರಷ್ಯಾಕ್ಕೆ ಸಹಾಯ ಮಾಡಿದರೆ ಚೀನಾ ಕಠಿಣ ಪರಿಣಾಮಗಳನ್ನು ಎದುರಿಸಬೇಕಾಗುತ್ತದೆ ಎಂದು ಅಮೆರಿಕ ಎಚ್ಚರಿಕೆ ನೀಡಿದೆ. ಯುದ್ಧ ಪ್ರಾರಂಭವಾದ ನಂತರ ಮಿಲಿಟರಿ ನೆರವು ನೀಡುವಂತೆ ರಷ್ಯಾ ಚೀನಾವನ್ನು ಕೇಳಿಕೊಂಡಿದೆ ಎನ್ನಲಾಗಿದೆ. ಉಕ್ರೇನ್ ಗೆ 500ಕ್ಕೂ ಹೆಚ್ಚು ಜನರೇಟರ್ ಗಳನ್ನು ಯುಕೆ ಪೂರೈಸಲಿದೆ ಎಂದು ಪ್ರಧಾನಿ ಬೋರಿಸ್ ಜಾನ್ಸನ್ ಹೇಳಿದ್ದಾರೆ. ಜನರೇಟರ್ ಗಳು ಆಶ್ರಯ ಮತ್ತು ಆಸ್ಪತ್ರೆಗಳು ಸೇರಿದಂತೆ ಅಗತ್ಯ ಸೇವೆಗಳಿಗೆ ಶಕ್ತಿಯನ್ನು ಒದಗಿಸಲಿದೆ. ಉಕ್ರೇನ್ನ ಅಧ್ಯಕ್ಷ ವೊಲೊಡಿಮಿರ್ ಝೆಲೆನ್ಸ್ಕಿ ಜನರೇಟರ್ ಗಳಿಗಾಗಿ ಯುಕೆಗೆ ಮನವಿ ಮಾಡಿಕೊಂಡಿದ್ದರು. ರಷ್ಯಾ ದಾಳಿ ಯ ಬಳಿಕ ಉಕ್ರೇನ್ ವಿದ್ಯುತ್ ಕಡಿತ ಅನುಭವಿಸುತ್ತಿದೆ.
0 171 Less than a minute