ಪವರ್ ಸ್ಟಾರ್’ ಪುನೀತ್ ರಾಜ್ಕುಮಾರ್ ನಟನೆಯ ‘ಜೇಮ್ಸ್’ ಸಿನಿಮಾ ಎಲ್ಲ ಕಡೆಗಳಲ್ಲಿ ಧೂಳೆಬ್ಬಿಸಿದೆ. ಮೊದಲ ದಿನ ‘ಜೇಮ್ಸ್’ ಸಿನಿಮಾದ ಬಾಕ್ಸ್ ಆಫೀಸ್ ಕಲೆಕ್ಷನ್ ಬರೋಬ್ಬರಿ 30 ಕೋಟಿ ರೂಪಾಯಿಗಿಂತಲೂ ಅಧಿಕ ಗಳಿಕೆ ಮಾಡಿದೆ. ಈ ಮೂಲಕ ಯಶ್ ನಟನೆಯ ‘ಕೆಜಿಎಫ್: ಚಾಪ್ಟರ್ 1’ ಚಿತ್ರದ ದಾಖಲೆಯನ್ನೂ ಉಡೀಸ್ ಮಾಡಿದೆ.
ಕರ್ನಾಟಕ ಮಾತ್ರವಲ್ಲದೇ ಹೊರ ರಾಜ್ಯ ಮತ್ತು ವಿದೇಶಗಳಲ್ಲೂ ‘ಜೇಮ್ಸ್’ ಪ್ರದರ್ಶನ ಕಾಣುತ್ತಿದೆ. ಪುನೀತ್ ರಾಜ್ ಕುಮಾರ್ ಕೊನೇ ಸಿನಿಮಾ ಎಂಬ ಕಾರಣಕ್ಕೆ ಅಭಿಮಾನಿಗಳು ಮುಗಿಬಿದ್ದು ಈ ಚಿತ್ರವನ್ನು ನೋಡುತ್ತಿದ್ದಾರೆ. ಅಭಿಮಾನಿಗಳ ಪಾಲಿಗೆ ಇದೊಂದು ಎಮೋಷನ್ ಆಗಿದೆ. ಈ ಸಿನಿಮಾಗೆ ಸಿಗುತ್ತಿರುವ ಅಭೂತಪೂರ್ವ ಯಶಸ್ಸು ಕಂಡು ಫ್ಯಾನ್ಸ್ ಖುಷಿ ಆಗಿದ್ದಾರೆ. ಈ ಖುಷಿಯನ್ನು ಸವಿಯಲು ಅಪ್ಪು ನಮ್ಮ ಜೊತೆ ಇಲ್ಲ ಎಂಬ ನೋವು ಎಲ್ಲರನ್ನೂ ಕಾಡುತ್ತಿದೆ.