ತಮಿಳುನಾಡಿಗೆ ತಿರುಗೇಟು ನೀಡಿದ ಸಿಎಂ ಬೊಮ್ಮಾಯಿ

ತಮಿಳುನಾಡು ನಿರ್ಣಯ‌ ಕಾನೂನು ಬಾಹಿರ ಎಂದು ಸಿಎಂ ಬೊಮ್ಮಾಯಿ ವಿಧಾನಸಭೆಯಲ್ಲಿ ತಿಳಿಸಿದ್ದಾರೆ. ಮೇಕೆದಾಟು ಕುಡಿಯುವ ನೀರು ಹಾಗೂ ವಿದ್ಯುತ್ ಉತ್ಪಾದನೆಗಾಗಿ ಇರೋ ಯೋಜನೆಯಾಗಿದೆ. ಯೋಜನೆಯಿಂದ ತಮಿಳುನಾಡಿಗೆ ಯಾವುದೇ‌ ಸಮಸ್ಯೆ ಇಲ್ಲ. ತಮಿಳುನಾಡು ಹೆಚ್ಚುವರಿ ನೀರನ್ನ ಬಳಕೆ ಮಾಡಿ‌ ಯೋಜನೆ ರೂಪಿಸುತ್ತಿದೆ. ಅದಕ್ಕೆ ಯಾವುದೇ ಅನುಮತಿ ಇಲ್ಲದೆ ಅಡಿಗಲ್ಲು ಹಾಕುವ ಪ್ರಯತ್ನ ನಡೆಯುತ್ತಿದೆ. ನಾವು ಕಾವೇರಿ ನೀರನ್ನು ಬಳಕೆ ಮಾಡುವ ಎಲ್ಲ ಸಂದರ್ಭದಲ್ಲಿ ತಮಿಳುನಾಡಿನಿಂದ ಅಡ್ಡಿಯಾಗುತ್ತಿದೆ. ನಮ್ಮ ನೀರಿನ ಹಕ್ಕು ಪಡೆದುಕೊಳ್ಳಲು ನಾವು ಪರಿತಪಿಸುವುದು ರಾಜ್ಯದ ಹಿತ ದೃಷ್ಟಿಯಿಂದ ಸರಿಯಲ್ಲ ಎಂದು ಹೇಳಿದ್ರು. ಕೇಂದ್ರಕ್ಕೂ ಒತ್ತಾಯ ಮಾಡುತ್ತೇವೆ. ನಮ್ಮ ಡಿಪಿಆರ್ ಹಾಗೂ ಪರಿಸರ ಇಲಾಖೆಯ ಅನುಮತಿ ಸಿಗಬೇಕು .ಅದರಲ್ಲಿ ಎರಡು ಮಾತಿಲ್ಲ. ತಮಿಳುನಾಡು ನಿರ್ಣಯ‌ ಕಾನೂನು ಬಾಹಿರ. ನಮ್ಮ ಹಕ್ಕಿನ ಮೇಲೆ ಗದಾ ಪ್ರಹಾರ ಮಾಡುವುದು ಒಕ್ಕೂಟ ವ್ಯವಸ್ಥೆಗೆ ವಿರುದ್ಧವಾಗಿದೆ ಎಂದು ಸಿಎಂ ತಿಳಿಸಿದ್ರು. ನಮ್ಮ ನಿಲುವು ಈ ಬಗ್ಗೆ ಸ್ಪಷ್ಟವಾಗಿದೆ. ನಾಳೆ ಸದನದಲ್ಲಿ ನಿರ್ಣಯ ತರುತ್ತೇವೆ ಎಂದು ಹೇಳಿದ್ರು. ಈ ವಿಚಾರದಲ್ಲಿ ವಿಳಂಬ ಮಾಡುವುದು ಸರಿಯಲ್ಲ . ಕಾನೂನು ಸಲಹೆಗಾರರ ಜೊತೆ ಸಂಜೆ ಈ ಬಗ್ಗೆ ಚರ್ಚೆ ನಡೆಸಲಾಗುವುದು ಎಂದು ತಿಳಿಸಿದ್ರು.

Related Articles

Leave a Reply

Your email address will not be published. Required fields are marked *

Back to top button
Close

Adblock Detected

Support Free Content We use ads to keep our content free for you. Please allow ads and let sponsors fund your surfing. Thank you!