ಸಿದ್ದರಾಮಯ್ಯ ಪರಿಸ್ಥಿತಿ ತುಘಲಕ್ ರೀತಿ ಆಗಿದೆ. ಅವರ ನಾಲಿಗೆ ಮೇಲೆ ಅವರಿಗೆ ಹಿಡಿತ ಇಲ್ಲ ಎಂದು ಒಳ್ಳಾರಿ ಉಸ್ತುವಾರಿ ಸಚಿವ ಶ್ರೀರಾಮುಲು ಹೇಳಿದ್ದಾರೆ. ಸಿದ್ದರಾಮಯ್ಯ ಪರಿಸ್ಥಿತಿ ನೆನಪಿಸಿಕೊಂಡರೆ ನೋವಾಗುತ್ತದೆ. ಅವರ ನಾಲಿಗೆ ಮೇಲೆ, ಅವರ ಮಾತುಗಳ ಮೇಲೆ ಅವರಿಗೆ ಹಿಡಿತ ಇಲ್ಲ. ಅವರು ಬುದ್ದಿವಂತರು ಅಂದುಕೊಂಡಿದ್ದಾರೆ.
ಅಹಂಕಾರದಿಂದ ಹೇಳಿಕೆ ನೀಡುತ್ತಿದ್ದಾರೆ. ರಾಜಕಾರಣಕ್ಕಾಗಿ ಗುರು ಪರಂಪರೆಯನ್ನು ಅವಮಾನ ಮಾಡಿದ್ದಾರೆ. ಪರಮಪೂಜ್ಯರ ವಿರುದ್ಧ ಮಾತನಾಡಿರುವುದಕ್ಕೆ ರಾಜ್ಯಾದೆಲ್ಲೆಡೆ ಖಂಡನೆ ವ್ಯಕ್ತವಾಗಿದೆ. ಗುರುಪರಂಪರೆ ಅಷ್ಟೇ ಅಲ್ಲದೇ ಹನುಮನ ಬಗ್ಗೆ ಸಹ ಹೇಳಿಕೆ ನೀಡಿ, ನಂತರ ಹೇಳಿಕೆಯನ್ನು ತಿರುಚುವ ಪ್ರಯತ್ನ ಮಾಡುತ್ತಿದ್ದಾರೆ. ಸ್ವಾಮೀಜಿಗಳಿಗೆ ಅಪಮಾನ ಮಾಡಿರುವ ಸಿದ್ದರಾಮಯ್ಯನವರು ಕ್ಷಮೆಯಾಚಿಸಬೇಕು ಎಂದು ಆಗ್ರಹಿಸಿದ್ದಾರೆ.
ಇದನ್ನು ಓದಿ :- ಸಿದ್ದರಾಮಯ್ಯ ಬಗ್ಗೆ ಮಾತಾಡುವ ಅಗತ್ಯವಿಲ್ಲ – ಹೆಚ್.ಡಿ ಕುಮಾರಸ್ವಾಮಿ
ನಾವೂ ಚುನಾವಣೆಗೆ ತಯಾರಿಯಾಗಿದ್ದೇವೆ
ನಾವೂ ಚುನಾವಣೆಗೆ ತಯಾರಿಯಾಗಿದ್ದೇವೆ. ಪಂಚ ರಾಜ್ಯಗಳ ಚುನಾವಣೆಯ ನಂತರ ಕಾಂಗ್ರೆಸ್ ಪಕ್ಷದ ನಾಯಕರ ಪರಿಸ್ಥಿತಿ ಹೀನಾಯವಾಗಿದೆ. 2023ರಲ್ಲಿ ರಾಜ್ಯದಲ್ಲಿ ಬಿಜೆಪಿ 170ಕ್ಕೂ ಹೆಚ್ಚು ಸ್ಥಾನಗಳಿಸುತ್ತದೆ. ಮುಖ್ಯಮಂತ್ರಿ ಬೊಮ್ಮಾಯಿ ನೇತೃತ್ವದಲ್ಲಿ ಬಿಎಸ್ವೈ ಮಾರ್ಗದರ್ಶನದಲ್ಲಿ ಚುನಾವಣೆ ಎದುರಿಸುತ್ತೇವೆ.
ನಾನು ಯಾರ ವಿರುದ್ಧವಾದರೂ ಸ್ಪರ್ಧೆ ಮಾಡಲು ಸಿದ್ದ. ನಾನು ಸ್ಪರ್ಧೆ ಮಾಡುವ ಕುರಿತು ಹೈಕಮಾಂಡ್ ಜೊತೆ ಚರ್ಚೆ ಮಾಡಬೇಕಿದೆ. ಪಕ್ಷ ಅಧಿಕಾರಕ್ಕೆ ಬರಲು ಹೈಕಮಾಂಡ್ ಹೇಳಿದ ಕಡೆ ಸ್ಪರ್ಧೆ ಮಾಡುವೆ. ಪಕ್ಷ ಸೂಚಸಿದ ಕ್ಷೇತ್ರದಲ್ಲಿ ಯಾರ ವಿರುದ್ಧ ಬೇಕಾದರೂ ಸ್ಪರ್ಧೆ ಮಾಡುತ್ತೇನೆ ಎಂದು ತಿಳಿಸಿದ್ರು.
ಇದನ್ನು ಓದಿ :- ಬಿಜೆಪಿ ಯುವ ಮೋರ್ಚಾ ವತಿಯಿಂದ ಬೆಂಗಳೂರಿನಿಂದ ಕೋಲಾರದ ವರೆಗೂ ಸೈಕಲ್ ಜಾಥಾ