ಕಾರ್ಮಿಕ ಸಂಘಟನೆಗಳು ಕರೆ ನೀಡಿರುವ 48 ಗಂಟೆಗಳ ರಾಷ್ಟ್ರವ್ಯಾಪಿ ಬಂದ್‌ನಲ್ಲಿ ಭಾಗವಹಿಸದಂತೆ ಕೇರಳ ಹೈಕೋರ್ಟ್ ಸರ್ಕಾರಿ ನೌಕರರಿಗೆ ನಿರ್ಬಂಧ ವಿಧಿಸಿದೆ. ಈ ಬಗ್ಗೆ ಕೂಡಲೇ ಆದೇಶ ಹೊರಡಿಸುವಂತೆ ಸರ್ಕಾರಕ್ಕೆ ಸೂಚಿಸಿದೆ.
ಸರ್ಕಾರಿ ನೌಕರರು ಕಾರ್ಮಿಕರ ವ್ಯಾಪ್ತಿಗೆ ಬರುವುದಿಲ್ಲ ಮತ್ತು ಅವರು ಮುಷ್ಕರದಲ್ಲಿ ಭಾಗವಹಿಸುವುದು ಸೇವಾ ನಿಯಮಗಳಿಗೆ ವಿರುದ್ಧವಾಗಿದೆ ಎಂದು ನ್ಯಾಯಾಲಯ ಹೇಳಿದೆ. ಕಾರ್ಮಿಕರು, ರೈತರು ಮತ್ತು ಸಾಮಾನ್ಯ ಜನರ ಮೇಲೆ ಪರಿಣಾಮ ಬೀರುವ ಕೇಂದ್ರ ಸರ್ಕಾರದ ನೀತಿಗಳ ವಿರುದ್ಧ ಅಖಿಲ ಭಾರತ ಬ್ಯಾಂಕ್ ನೌಕರರ ಸಂಘದ ಬೆಂಬಲದೊಂದಿಗೆ ಕೇಂದ್ರ ಕಾರ್ಮಿಕ ಸಂಘಟನೆಗಳ ಜಂಟಿ ವೇದಿಕೆಯು ಮಾರ್ಚ್ 28 ಮತ್ತು 29 ರಂದು ರಾಷ್ಟ್ರವ್ಯಾಪಿ ಮುಷ್ಕರಕ್ಕೆ ಕರೆ ನೀಡಿದೆ.
ಇದನ್ನು ಓದಿ :- IT NOTICE – ಹೆಚ್ಡಿಡಿ ಪತ್ನಿ ಚೆನ್ನಮ್ಮಗೆ ಆದಾಯರ ತೆರಿಗೆ ಅಧಿಕಾರಿಗಳಿಂದ ನೋಟಿಸ್