ಕುಮಾರಸ್ವಾಮಿ ರಾಜಕೀಯ ಜೀವನವೇ ಒಂದು ಡ್ರಾಮಾ – ಟ್ವೀಟ್ ಮೂಲಕ ಬಿಜೆಪಿ ತಿರುಗೇಟು

ರಾಜ್ಯ ಬಿಜೆಪಿ ಘಟಕ ಸರಣಿ ಟ್ವೀಟ್ ಮಾಡುವ ಮೂಲಕ ಮಾಜಿ ಸಿಎಂ ಹೆಚ್ಡಿ ಕುಮಾರಸ್ವಾಮಿ(HD Kumaraswamy) ವಿರುದ್ಧ ವಾಗ್ದಾಳಿ ನಡೆಸಿದೆ. ಕುಮಾರಸ್ವಾಮಿ ಟ್ವೀಟ್‌ಗಳಿಗೆ ರಾಜ್ಯ ಬಿಜೆಪಿ ಘಟಕ ತಿರುಗೇಟು ನೀಡಿದೆ.

ಉಪಸಭಾಪತಿಯ ಕುರ್ಚಿಗೆ ಗಂಟುಬಿದ್ದು ಅದು ಸಿಗದಿದ್ದಾಗ ಕಾಂಗ್ರೆಸ್‌ (Congress) ತ್ಯಜಿಸಿ ಜೆಡಿಎಸ್‌ ಸೇರಿರುವ ವ್ಯಕ್ತಿಯ ಸಮುದಾಯವನ್ನು ಮೆಚ್ಚಿಸಲು ಹೆಚ್‌ಡಿಕೆ (HDK) ಸರ್ಕಸ್‌ ಮಾಡುತ್ತಿದ್ದಾರೆ. ಇಂತಹ ಸದಾರಮೆ ನಾಟಕ ಕುಮಾರಸ್ವಾಮಿಗೆ ಹೊಸತಲ್ಲ. ಕುಮಾರ ಸ್ವಾಮಿಯ ರಾಜಕೀಯ ಜೀವನವೇ ಒಂದು ಡ್ರಾಮಾ. ಇವರ ಕುಟುಂಬವೇ ದೊಡ್ಡ ಡ್ರಾಮಾ ಕಂಪನಿ ಎಂದು ಹ್ಯಾಷ್ ಟ್ಯಾಗ್ ಬಳಸಿ #ಹಿಂದೂವಿರೋಧಿ ಜೆಡಿಎಸ್‌ (JDS) ಎಂದು ಬಿಜೆಪಿ ಟ್ವೀಟ್ ಮಾಡಿದೆ.


ಸಾಂದರ್ಭಿಕ ಕೂಸೊಂದು ಹಿಂದುತ್ವದ ಬಗ್ಗೆ ಹಿಂದೂ ಸಂಘಟನೆಗಳಿಗೆ ಪಾಠ ಮಾಡುತ್ತಿದೆ. ಹಿಂದೂ ಸಂಘಟನೆಗಳು ಅವರಂತೆ ಕೇವಲ ತನ್ನ ಕುಟುಂಬದ ಉನ್ನತಿಗಾಗಿ ಕೆಲಸ ಮಾಡುತ್ತಿಲ್ಲ. ಅವರು ಅಧಿಕಾರಕ್ಕಾಗಿ ಕಣ್ಣೀರು ಹಾಕುತ್ತಾರೆ ಆದರೆ ಹಿಂದೂ ಸಂಘಟನೆಗಳು ಹಿಂದೂ ಸಮಾಜದ ಕಣ್ಣೀರು ಒರೆಸುವ ಕೆಲಸ ಮಾಡುತ್ತಿವೆ. ಮಾನ್ಯ #LuckyDipCM ಕುಮಾರಸ್ವಾಮಿ ಅವರೇ, ಓತಿಕ್ಯಾತಕ್ಕೆ ಬೇಲಿಯ ಗೂಟ ಸಾಕ್ಷಿ ಎಂಬ ಗಾದೆ ಮಾತು ನೆನಪಿಸಿಕೊಳ್ಳಿ. ನಿಮ್ಮ ಜಾತ್ಯತೀತ ನಡೆ ಎಂಬುದು ಅವಕಾಶವಾದದ ಪರಿಷ್ಕೃತ ರೂಪ. ಅಧಿಕಾರ ಅನುಭವಿಸಲು ಏನೂ ಬೇಕಾದರೂ ಮಾಡಲು ಸಿದ್ದವಾಗಿರುವವರು ನೀವು. ನಿಮ್ಮಿಂದ ಯಾವ ವ್ಯಕ್ತಿಯೂ ಸಂಘಟನೆಯೂ ಪಾಠ ಕಲಿಯಬೇಕಾಗಿಲ್ಲ ಎಂದು ಟ್ವೀಟ್ ಮೂಲಕ ಮಾಜಿ ಸಿಎಂ ಕುಮಾರಸ್ವಾಮಿ ವಿರುದ್ಧ ಗುಡುಗಿದೆ.


ಬಾಯಿಗೆ ಬಂದಂತೆ ಮಾತನಾಡುವುದು ಆ ಬಳಿಕ ವಿಷಾದ ವ್ಯಕ್ತಪಡಿಸುವುದು ಸಾಂದರ್ಭಿಕ ಸಿಎಂ ಕುಮಾರಸ್ವಾಮಿ. ಅವರ ರಾಜಕೀಯ ವರಸೆ. ಯಾವ ವಿಚಾರದಲ್ಲಿ ತನ್ನ ಮತಬ್ಯಾಂಕ್‌ ಗಟ್ಟಿಯಾಗುತ್ತದೋ ಆ ವಿಚಾರವನ್ನು ಗಟ್ಟಿಯಾಗಿ ಹಿಡಿದುಕೊಳ್ಳುವುದು ಇವರ ಜಾಯಮಾನ. ಕುಮಾರಸ್ವಾಮಿ ಅವರೇ, ಗಂಡಸ್ತನದ ಬಗ್ಗೆ ಮಾತನಾಡುವುದರಲ್ಲಿ “ಪುರುಷಾರ್ಥ” ಅಡಗಿದೆಯೇ? ಎಂದು ಕುಮಾರಸ್ವಾಮಿಗೆ ಬಿಜೆಪಿ ಪ್ರಶ್ನಿಸಿದೆ.

ಇದನ್ನು ಓದಿ :- ಕರ್ನಾಟಕ ಕರ್ನಾಟಕವಾಗಿಯೇ ಉಳಿಯಬೇಕು – ಬಿಜೆಪಿಗೆ ತಿರುಗೇಟು ನೀಡಿದ ಕುಮಾರಸ್ವಾಮಿ

Related Articles

Leave a Reply

Your email address will not be published. Required fields are marked *

Back to top button
Close

Adblock Detected

Support Free Content We use ads to keep our content free for you. Please allow ads and let sponsors fund your surfing. Thank you!