ಯುಗಾದಿ ಹಬ್ಬದ ಹೊಸ ತೊಡಕಿನ ಹಿನ್ನೆಲೆಯಲ್ಲಿ ರಾಜ್ಯದ ಹಲವೆಡೆ ಮಾಂಸ ಮಾರಾಟ ಜೋರಾಗಿದೆ. ಮಾಂಸದ ಮಳಿಗೆಗಳಲ್ಲಿ ಜನರ ದಂಡೇ ನೆರೆದಿದೆ. ಹಲಾಲ್ ಕಟ್ ಹಾಗೂ ಜಟ್ಕಾ ಕಟ್ ವಿವಾದದ ಮಧ್ಯೆಯೇ ಈ ಬಾರಿ ಮಾಂಸ ಮಾರಾಟ ಭರ್ಜರಿಯಾಗಿ ಸಾಗಿದೆ.
ಬೆಂಗಳೂರು, ಮೈಸೂರು, ತುಮಕೂರು, ದಾವಣಗೆರೆ ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ಮಧ್ಯರಾತ್ರಿಯಿಂದಲೇ ಮಾಂಸ ಮಾರಾಟ ಅಂಗಡಿಗಳಲ್ಲಿ ಸಿದ್ಧತೆ ನಡೆದಿತ್ತು. ಬೆಳಗ್ಗೆ ಮಾಂಸದಂಗಡಿಗಳತ್ತ ಜನರ ದಂಡು ಬರಲಾರಂಭಿಸಿದೆ. ವಿವಿಧ ಜಿಲ್ಲೆಯ ಪ್ರಮುಖ ಮಾರುಕಟ್ಟೆಗಳಲ್ಲಿ ಮಾಂಸ ಖರೀದಿಗೆ ಜನ ಮುಗಿಬಿದ್ದಿದ್ದಾರೆ.
ಕೆಲ ಮಳಿಗೆಗಳಲ್ಲಿ ಹಲಾಲ್ ಕಟ್, ಜಟ್ಕಾ ಕಟ್ ಎಂಬ ಬೋರ್ಡ್ಗಳನ್ನೂ ಹಾಕಿದ್ದು, ಜಟ್ಕಾಕಟ್ಗೆ ಬೇಡಿಕೆ ಹೆಚ್ಚಾಗಿದೆ. ಕೋವಿಡ್ ಹಿನ್ನೆಲೆಯಲ್ಲಿ ಕಳೆದ ಎರಡು ವರ್ಷಗಳಿಂದಲೂ ನಿರಾಶೆಗೊಂಡಿದ್ದ ವ್ಯಾಪಾರಿಗಳ ಮೊಗದಲ್ಲೂ ಹರುಷ ತುಂಬಿದೆ.
ಇದನ್ನು ಓದಿ :- ಹಲಾಲ್- ಜಟ್ಕಾ ವಿವಾದದ ನಡುವೆ ಪಶುಸಂಗೋಪನಾ ಇಲಾಖೆ ಮಹತ್ವದ ಆದೇಶ