ಇತ್ತೀಚಿಗೆ ರೈಲ್ವೆ ಪೊಲೀಸ್ ಎಡಿಜಿಪಿ ಹುದ್ದೆಗೆ ರಾಜೀನಾಮೆ ನೀಡಿದ್ದ ಹಿರಿಯ ಐಪಿಎಸ್ ಅಧಿಕಾರಿ ಬಿ. ಭಾಸ್ಕರ್ ರಾವ್ ಆಮ್ ಆದ್ಮಿ ಪಕ್ಷವನ್ನು ಸೇರಲಿದ್ದಾರೆ.
ನವದೆಹಲಿಯ ದೀನ್ ದಯಾಳ್ ಉಪಾಧ್ಯಾಯ ಮಾರ್ಗದಲ್ಲಿರುವ ಎಎಪಿ ಕಚೇರಿಯಲ್ಲಿ ಸೋಮವಾರ ಮಧ್ಯಾಹ್ನ ಅವರು ಪಕ್ಷ ಸೇರಲಿದ್ದಾರೆ. ಈ ಸಂದರ್ಭದಲ್ಲಿ ಮನೀಶ್ ಸಿಸೋಡಿಯಾ ಮತ್ತಿತರರು ಹಾಜರಾಗಲಿದ್ದಾರೆ ಎಂದು ಪಕ್ಷದ ಮೂಲಗಳು ತಿಳಿಸಿವೆ. ರೈಲ್ವೆ ಪೊಲೀಸ್ ಎಡಿಜಿಪಿ ಹುದ್ದೆಗೆ ಸೆಪ್ಟೆಂಬರ್ 2021ರಲ್ಲಿ ಭಾಸ್ಕರ್ ರಾವ್ ರಾಜೀನಾಮೆ ಸಲ್ಲಿಸಿದ್ದರು. ಸರ್ಕಾರ ಕಳೆದ ವಾರಷ್ಟೇ ಅವರ ರಾಜೀನಾಮೆಯನ್ನು ಅಂಗೀಕರಿಸಿತ್ತು.
ಇದನ್ನು ಓದಿ :- ಯುವಕರ ಜೊತೆ ಗೋಲಿ ಆಟವಾಡಿದ ಎಂ.ಪಿ ರೇಣುಕಾಚಾರ್ಯ