ಪಾಕಿಸ್ತಾನ ಸಂಸತ್ತಿನಲ್ಲಿ ವಿಶ್ವಾಸಮತ ಗಳಿಸುವಲ್ಲಿ ವಿಫಲರಾದ ಇ ಮ್ರಾನ್ ಖಾನ್ ಅಧಿಕಾರ ಅಂತ್ಯವಾಗಿದೆ. ಅಧಿಕಾರ ಉಳಿಸಿಕೊಳ್ಳಲು ಕೊನೆ ಕ್ಷಣದವರೆಗೂ ಕಸರತ್ತು ನಡೆಸಿದ್ದ ಇಮ್ರಾನ್ ಖಾನ್ ಅವರ 4 ವರ್ಷಗಳ ಅಧಿಕಾರವನ್ನು ಕಳೆದುಕೊಂಡಿದ್ದಾರೆ.
ಈ ಮೂಲಕ ಇಮ್ರಾನ್ ಖಾನ್ ಅವರು ಅವಿಶ್ವಾಸ ಮತದಲ್ಲಿ ಸೋತ ಪಾಕಿಸ್ತಾನದ ಮೊದಲ ಪ್ರಧಾನಿಯಾಗಿದ್ದಾರೆ. ಸದನದಲ್ಲಿ ಹಾಜರಿದ್ದ ಪ್ರತಿಪಕ್ಷಗಳ 176 ಹಾಗೂ ಆಡಳಿತ ಪಕ್ಷದ 22 ಸದಸ್ಯರು ನಿರ್ಣಯದ ಪರವಾಗಿ ಮತ ಹಾಕಿದರು. ವಿಶ್ವಾಸಮತ ಕಳೆದುಕೊಳ್ಳುತ್ತಿದ್ದಂತೆಯೇ ಇಮ್ರಾನ್ ಖಾನ್ ಅವರು ಪ್ರಧಾನಿ ಕಚೇರಿಯಿಂದ ನಿರ್ಗಮಿಸಿದರು. ಇದನ್ನು ಓದಿ : – “ಇಮ್ರಾನ್ ಓರ್ವ ಸೈಕೋಪಾತ್” ಅಂದ ಪಾಕ್ ಸುಂದರಿ ಯಾರು ಗೊತ್ತಾ..?
ನಾಳೆ ಹೊಸ ಪ್ರಧಾನಿ ಆಯ್ಕೆ ನಡೆಯಲಿದ್ದು, ಬಹುತೇಕ ಶಹಬಾಜ್ ಷರೀಫ್ ಮುಂದಿನ ಪ್ರಧಾನಿ ಆಗುವ ಸಾಧ್ಯತೆಗಳಿದೆ. ಇಮ್ರಾನ್ ಖಾನ್ ವಿರುದ್ಧ 174 ಮತಗಳು ಚಲಾವಣೆ ಆಗಿದೆ. ಅವಿಶ್ವಾಸ ನಿರ್ಣಯವನ್ನು ಮತಕ್ಕೆ ಹಾಕುವುದಿಲ್ಲ ಎನ್ನುವುದು ದೃಢಪಡುತ್ತಿದ್ದಂತೆಯೇ ಮುಖ್ಯ ನ್ಯಾಯಮೂರ್ತಿ ಉಮರ್ ಅವರು ರಾತ್ರಿ 12 ಗಂಟೆಗೆ ಸುಪ್ರೀಂ ಕೋರ್ಟ್ ಬಾಗಿಲು ತೆರೆಯುವಂತೆ ಅಧಿಕಾರಿಗಳಿಗೆ ಆದೇಶ ನೀಡಿದರು.
ಆರಂಭದಲ್ಲಿ ಸುಪ್ರೀ ಕೋರ್ಟ್ ಸ್ವಯಂಪ್ರೇರಿತವಾಗಿ ನ್ಯಾಯಾಂಗ ನಿಂದನೆ ಪ್ರಕರಣ ದಾಖಲಿಸಿಕೊಳ್ಳಲು ನಿರ್ಧರಿಸಿತ್ತಾದರೂ, ನಂತರ ಸುಪ್ರೀಂ ಕೋರ್ಟ್ ಬಾರ್ ಅಸೋಸಿಯೇಷನ್ ನ್ಯಾಯಾಂಗ ನಿಂದನೆ ಪ್ರಕರಣ ದಾಖಲಿಸಿತು. ಇತ್ತ ಸಂಸತ್ತಿನಲ್ಲಿ 12.20ಕ್ಕೆ ಮತದಾನ ಪ್ರಕ್ರಿಯೆ ಆರಂಭವಾದ ಕಾರಣ, ಕಲಾಪವನ್ನು 12.35ಕ್ಕೆ ಮುಂದೂಡಲಾಯಿತು. ಸರ್ಕಾರ ಪತನವಾಗುವುದು ಖಚಿತವಾಗುತ್ತಿದ್ದಂತೆಯೇ ದೇಶದ ವಿಮಾನ ನಿಲ್ದಾಣಗಳಲ್ಲಿ ಸೇನೆಯು ಕಟ್ಟೆಚ್ಚರ ವಹಿಸಿತು. ಯಾವೊಬ್ಬ ಅಧಿಕಾರಿಯೂ ದೇಶದಿಂದ ಹೊರಗೆ ಹೋಗುವಂತಿಲ್ಲ ಎಂಬ ಆದೇಶ ಹೊರಡಿಸಿತು.
ಇದನ್ನು ಓದಿ : – ಭಾರತದ ವಿರುದ್ಧ ಮಾತನಾಡಲು ಧೈರ್ಯ ಬೇಕು – ಪಾಕ್ ಪ್ರಧಾನಿ ಇಮ್ರಾನ್ ಖಾನ್