ಕೊರೊನಾ ಹಿನ್ನೆಲೆಯಲ್ಲಿ 2 ವರ್ಷಗಳಿಂದ ಕಳೆಗಟ್ಟಿದ್ದ ಕರಗ ಮಹೋತ್ಸವವನ್ನ ಈ ವರ್ಷ ಅದ್ದೂರಿಯಾಗಿ ಆಚರಿಸಲಾಗುತ್ತಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲ್ಲೂಕಿನ ಶಿವನಾಪುರದಲ್ಲಿ ನಡೆದ 76ನೇ ವರ್ಷದ ಹೂವಿನ ಕರಗ ಮಹೋತ್ಸವ ನಡೆಯಿತು.
ಎಲ್ಲಾ ಧರ್ಮಗಳು ಒಂದಾಗಿ ಗ್ರಾಮದ ಊರ ಹಬ್ಬ ರೀತಿಯಲ್ಲಿ ಕರಗ ಮಹೋತ್ಸವಕ್ಕೆ ಚಾಲನೆ ನೀಡಿದ್ರು. ಹೊಸಕೋಟೆ ತಾಲ್ಲೂಕಿನಲ್ಲಿ ಮೊದಲನೇ ಕರಗ ಮಹೋತ್ಸವಕ್ಕೆ ಶಿವನಾಪುರ ಗ್ರಾಮದಲ್ಲಿ ಚಾಲನೆ ದೊರೆಯಲಿದ್ದು ನಂತರ ತಾಲೂಕಿನ ಎಲ್ಲಾ ಗ್ರಾಮಗಳಲ್ಲಿ ಕರಗ ಮಹೋತ್ಸವ ಪ್ರಾರಂಭವಾಗಲಿದೆ. ಇದನ್ನು ಓದಿ :- ಮೋದಿಯಷ್ಟು ಸುಳ್ಳು ಹೇಳಿರುವ ಪ್ರಧಾನಿ ಯಾರು ಇಲ್ಲ- ಸಿದ್ದರಾಮಯ್ಯ ವಾಗ್ದಾಳಿ
ಕೊರೊನಾ ಹಿನ್ನೆಲೆಯಲ್ಲಿ ಕೇವಲ ದೇವಾಲಯದ ಆವರಣಕ್ಕೆ ಮಾತ್ರ ಸೀಮಿತವಾಗಿದ್ದ ಕರಗ ಮಹೋತ್ಸವ ಈಗ ಗ್ರಾಮಸ್ಥರ ಸಮ್ಮುಖದಲ್ಲಿ ವಿಜೃಂಭಣೆಯಿಂದ ನಡೆದಿದೆ. ಕರಗ ಮಹೋತ್ಸವ ಅಂಗವಾಗಿ ಈಗಾಗಲೇ ಗ್ರಾಮದ ಎಲ್ಲಾ ದೇವಾಲಯಗಳಲ್ಲಿ ವಿಶೇಷ ಪೂಜೆ ಸೇರಿದಂತೆ ಅನೇಕ ಧಾರ್ಮಿಕ ಕಾರ್ಯಕ್ರಮ ನಡೆಯಿತು.
ಇದನ್ನು ಓದಿ :- ರಾಜ್ಯದ ಹಲವೆಡೆ ಇಂದು ಮಳೆಯಾಗೋ ಸಾಧ್ಯತೆ – ಹವಮಾನ ಇಲಾಖೆ ಮುನ್ಸೂಚನೆ